ಸರ್ಕಾರಿ ಆಸ್ಪತ್ರೆಗೆ ಸಿಇಓ ದಿಢೀರ್ ಭೇಟಿ: ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಸೂಚನೆ

ಜಿಲ್ಲಾ ಸುದ್ದಿ

ಹೊಸದುರ್ಗ ಸರ್ಕಾರಿ ಆಸ್ಪತ್ರೆಗೆ ಸಿಇಓ
ದಿಢೀರ್ ಭೇಟಿ : ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸೂಚನೆ

 

 

ಹೊಸದುರ್ಗ ತಾಲ್ಲೂಕು ಬೆಲಗೂರು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಸಿಇಓ ಎಂಎಸ್ ದಿವಾಕರ್ ದಢೀರ್ ಭೇಟಿ ನೀಡಿದರು.
ಆಸ್ಪತ್ರೆಯ ಅಧಿಕಾರಿಗಳು, ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ಪರಿಶೀಲನೆ ನಡೆಸಿದರು.
ನಂತರ ಒಳ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು. ಅಲ್ಲೆ ಇದ್ದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು,ಹಾಗೂ ಆಸ್ಪತ್ರೆಯ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು. ನಂತರ ಪಶು ಚಿಕಿತ್ಸಾ ಕೇಂದ್ರಕ್ಕೂ ಭೇಟಿ ನೀಡಿದ ಸಿಇಓ
ರೈತರುಗಳ ಜಾನುವಾರುಗಳ ಆರೋಗ್ಯ ರಕ್ಷಣೆ ಮಾಡಬೇಕು, ಜಾನುವಾರುಗಳಿಗೆ ತಗುಲುವ ಚರ್ಮ ಗಂಟು ರೋಗದ ಬಗ್ಗೆಯೂ ಎಚ್ಚರಿಕೆ ವಹಿಸಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು. ಜಾನುವಾರುಗಳ ರೋಗ ರುಜಿನೆಗಳ ಬಗ್ಗೆ ಹಾಗೂ ಚಿಕಿತ್ಸೆಗಳ ಬಗ್ಗೆ ಮಾಹಿತಿ ಪಡೆದು ಕೊಂಡರು.ಈ ಸಂದರ್ಭದಲ್ಲಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಹಾಗೂ ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರುಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *