ಅಂಗವಿಕಲತೆ ದೇಹಕ್ಕೆ ಹೊರತು ಮನಸ್ಸಿಗಲ್ಲ

ರಾಜ್ಯ

ಅಂಗವಿಕಲತೆ ದೇಹಕ್ಕೆ ಹೊರತು ಮನಸ್ಸಿಗಲ್

 

 

ಅಂಗವಿಕಲತೆ ಎಂಬುವುದು ದೇಹಕ್ಕೆ ಹೊರತು, ಮನಸ್ಸಿಗಲ್ಲ. ಮಾನಸಿಕವಾಗಿ ಸದೃಢವಾಗಿ, ಇಚ್ಛಾಶಕ್ತಿ ಹೊಂದಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಹೇಳಿದರು.
ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ  ಪಂಚಾಯಿತಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಕಲಚೇತನರೂ ಬಹಳಷ್ಟು ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಲು ಅವಕಾಶವಿದೆ. ಸಂಗೀತ, ಕ್ರೀಡಾ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿಯೂ ವಿಕಲಚೇತನರು ಸಾಧನೆ ಮಾಡಿರುವ ಉದಾಹರಣೆಗಳಿವೆ. ಐಎಎಸ್ ಅಧಿಕಾರಿಗಳಾಗಿಯೂ ಸಾಧನೆ ಮಾಡಿದ್ದಾರೆ. ಅಂಗವಿಕಲರು ಎಂಬ ಕೀಳರಿಮೆ, ಮನಸ್ಥಿತಿ  ಬಿಡಬೇಕು. ಸಾಮಾನ್ಯ ಜನರು ಅಂಗವಿಕಲರನ್ನು ತಾತ್ಸಾರ ಮನೋಭಾವದಿಂದ ಕಾಣಬಾರದು ಎಂದು ಹೇಳಿದರು.
ವಿಕಲಚೇತನರಲ್ಲೂ ಸಾಕಷ್ಟು ಪ್ರತಿಭಾವಂತರಿರುತ್ತಾರೆ. ಅವರ ಪ್ರತಿಭೆ ಹೊರ ತೆಗೆಯಲು ಅವಕಾಶಗಳು ಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಿರುವುದು ಶ್ಲಾಘನೀಯ ಸಂಗತಿ ಎಂದು ಹೇಳಿದ ಅವರು, ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಪ್ರಗತಿಯಲ್ಲಿದ್ದು, 18 ವರ್ಷ ಮೇಲ್ಪಟ್ಟ ಅಂಗವಿಕಲರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಣಿ  ಮಾಡಿಸಿಕೊಳ್ಳಬೇಕು. ಇದರಿಂದ ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲವು ಮುಖ್ಯವಲ್ಲ, ಪಾಲ್ಗೊಳುವುದು ಮುಖ್ಯ. ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ನಮ್ಮ ಪ್ರತಿಭೆ ಅನಾವರಣ ಮಾಡಲು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ನಿಮ್ಮಗಳ ಪ್ರತಿಭೆ ಗುರುತಿಸಿ, ಮೂಲಭೂತ ಸೌಕರ್ಯ ಒದಗಿಸಲು ಸ್ಪರ್ಧೆಗಳು ನೆರವಾಗಲಿವೆ ಎಂದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಾಸ್ತವಿಕವಾಗಿ ಮಾತನಾಡಿ, ವಿಕಲಚೇತನರೂ ಸಾಮಾನ್ಯರಂತೆ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂಬ ನಿಟ್ಟಿನಲ್ಲಿ ಅವರಲ್ಲಿರುವ ಪ್ರತಿಭೆ ಗುರುತಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಅಂಗವಿಕಲಕರು ತಮ್ಮ ಪ್ರತಿಭೆ ಹೊರಹಾಕಿ ಇರುವ ಅವಕಾಶಗಳನ್ನು ಸದುಪಯೋಗ ಪಡೆಯಬೇಕು ಎಂದು ಕಿವಿಮಾತು ಹೇಳಿದರು.
20ನೇ ರಾಷ್ಟ್ರಮಟ್ಟದ ಪ್ಯಾರಾ ಕ್ರೀಡಾಕೂಟದಲ್ಲಿ ಚಳ್ಳಕೆರೆಯ ಅಂಧ ಕ್ರೀಡಾಪಟು ರಾಧಾ ಎಂಬ ವಿದ್ಯಾರ್ಥಿಯು 1500 ಮೀ ಓಟದಲ್ಲಿ ಬಂಗಾರದ ಪದಕ ಹಾಗೂ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಕ್ರೀಡಾ ಕ್ಷೇತ್ರದ ಸಾಧನೆಗೆ ಏಕಲವ್ಯ ಪ್ರಶಸ್ತಿಯೂ ಲಭಿಸಿದೆ.  ಮುಂಬರುವ ಡಿಸೆಂಬರ್ 3ರಂದು ಜಿಲ್ಲಾಡಳಿತ ವತಿಯಿಂದ ನಡೆಯುವ ಜಿಲ್ಲಾಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಗೌರವ ಸನ್ಮಾನ ಮಾಡಲಾಗುವುದು ಎಂದು ತಿಳಿಸಿದರು.
18 ರಿಂದ 45 ವರ್ಷ ವಯೋಮಿತಿಯ ವಿಕಲಚೇತನರಿಗೆ ವಿವಿಧ ರೀತಿಯ ಕ್ರೀಡಾ ಸ್ಪರ್ಧೆಗಳು ನಡೆದವು. ಅಂಧರಿಗೆ ಮಡಿಕೆ ಹೊಡೆಯುವುದು, ಕೇನ್ ರೇಸ್,  ಶ್ರವಣದೋಷವುಳ್ಳರಿಗೆ 100 ಮೀ ಓಟ, ಗುಂಡು ಎಸೆತ, ಜಾವಲಿನ್ ಥ್ರೋ, ದೈಹಿಕ ವಿಕಲಚೇತನರಿಗೆ 100 ಮೀ ಓಟ, ಗುಂಡು ಎಸೆತ, ಜಾವಲಿನ್ ಥ್ರೋ, ಬುದ್ಧಿ ಮಾಂದ್ಯವರಿಗೆ 100 ಮೀ ಓಟ, ಬಕೆಟ್‍ನಲ್ಲಿ ರಿಂಗ್ ಎಸೆತ, ಮ್ಯೂಜಿಕಲ್ ಚೇರ್ ಸ್ಪರ್ಧೆಗಳು ನಡೆದವು. ಜಾನಪದ ಗೀತೆ, ಭಾವಗೀತೆ ಹಾಗೂ ಭಕ್ತಿಗೀತೆಗಳು ಸೇರಿದಂತೆ ಇತ್ಯಾದಿ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ದೃಷ್ಠಿದೋಷ, ದೈಹಿಕ ವಿಕಲಚೇತನರು, ಬೌದ್ದಿಕ ವಿಕಲತೆ ಹೊಂದಿರುವವರು ಭಾಗವಹಿಸಿದ್ದು, ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಕೆಂಪಹನುಮಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಗೀತ ಶಿಕ್ಷಕಿ ಕೋಕಿಲಾ ಸೇರಿದಂತೆ ದೈಹಿಕ ಶಿಕ್ಷಣ ಶಿಕ್ಷಕರು, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಿಬ್ಬಂದಿ, ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂಗಳು, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.

Leave a Reply

Your email address will not be published. Required fields are marked *