ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಿಎಂ ಬೊಮ್ಮಾಯಿ

ಜಿಲ್ಲಾ ಸುದ್ದಿ

ಕೊಪ್ಪಳಕ್ಕೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಭೇಟಿ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಕೊಪ್ಪಳ : ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು, ಪಕ್ಷದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಡಿಸೆಂಬರ್ 15 ರಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿದರು.
ಪೂರ್ವ ನಿಗದಿಯಂತೆ, ಬೆಳಗ್ಗೆ ಹೊಸದಿಲ್ಲಿಯಿಂದ ವಿಶೇಷ ವಿಮಾನದ ಮೂಲಕ ಹೊರಟು ಕೊಪ್ಪಳ ತಾಲ್ಲೂಕಿನ ಗಿಣಿಗೇರಾ ಏರ್‌ಸ್ಟ್ರೀಪ್ (ಎಂ.ಎಸ್.ಪಿ.ಎಲ್ ವಿಮಾನ ನಿಲ್ದಾಣ)ಗೆ ಆಗಮಿಸಿದರು. ಈ ವೇಳೆ ಮುಖ್ಯಮಂತ್ರಿಗಳು ಮಾಧ್ಯಮದವರೊಂದಿಗೆ ಮಾತನಾಡಿದರು. ಬಳಿಕ ಮುಖ್ಯಮಂತ್ರಿಗಳು ಏರ್‌ಸ್ಟ್ರೀಪ್ ಹೊರಗಡೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಲ ಸಂಪನ್ಮೂಲ (ಭಾರಿ ಮತ್ತು ಮದ್ಯಮ ನೀರಾವರಿ) ಸಚಿವರಾದ ಗೋವಿಂದ ಎಂ.ಕಾರಜೋಳ, ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್, ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ, ಸಂಸದರಾದ ಸಂಗಣ್ಣ ಕರಡಿ, ಶಾಸಕರುಗಳಾದ ಪರಣ್ಣ ಈಶ್ವರಪ್ಪ ಮುನವಳ್ಳಿ, ಬಸವರಾಜ ದಢೇಸೂಗೂರು, ಹೇಮಲತಾ ನಾಯಕ ಹಾಗೂ ಶಶೀಲ್ ಜಿ.ನಮೋಶಿ, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಉಪವಿಭಾಗಾಧಿಕಾರಿಗಳಾದ ಬಸವಣ್ಣೆಪ್ಪ ಕಲಶೆಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಹಲವು ಗಣ್ಯರು ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *