ಆರೋಗ್ಯ ಸೂಚ್ಯಂಕದಲ್ಲಿ ಫಸ್ಟ್ ಇದ್ದ ಉಡುಪಿ ಇದೀಗ 18 ಕ್ಕೆ ಕುಸಿತ: ಅಧಿಕಾರಿಗಳ ಮೇಲೆ ಗರಂ ಆದ ಸಿಎಂ

ರಾಜ್ಯ

ಆರೋಗ್ಯ ಸೂಚ್ಯಂಕದಲ್ಲಿ ಕುಸಿತಕ್ಕೆ ಗರಂ
೨೦೧೫ ರಲ್ಲಿ ಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಈಗ ೧೮ ನೇ ಸ್ಥಾನದಲ್ಲಿರುವುದಕ್ಕೆ, ತಾಯಂದಿರು ಮತ್ತು ಮಕ್ಕಳ ಸಾವಿನ ಪ್ರಮಾಣದಲ್ಲಿ ಏರಿಕೆ ಆಗಿರುವುಕ್ಕೆ ಗರಂ ಆದ ಮುಖ್ಯಮಂತ್ರಿಗಳು ಜಿಲ್ಲಾ ಆರೋಗ್ಯಾಧಿಕಾರಿಗಳನ್ನು
ತರಾಟೆಗೆ ತೆಗೆದುಕೊಂಡರು.
ಅವರು ಉಡುಪಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಉಡುಪಿ ಸುಶಿಕ್ಷಿತರ ಜಿಲ್ಲೆ, ಆರೋಗ್ಯ ಸೂಚ್ಯಂಕದಲ್ಲಿ ಈ ಪ್ರಮಾಣದ ಕುಸಿತ ಕಂಡಿರುವುದಕ್ಕೆ ನಿಮ್ಮ ಹೊಣೆಗಾರಿಕೆ ಇಲ್ಲವಾ ಎಂದು ಡಿಹೆಚ್ಒ ಅವರನ್ನು ಪ್ರಶ್ನಿಸಿದ ಮುಖ್ಯಮಂತ್ರಿಗಳು ಜಿಲ್ಲೆಯನ್ನು ಮತ್ತೆ ಮೊದಲ ಸ್ಥಾನಕ್ಕೆ ತರಬೇಕು. ಇಲ್ಲದಿದ್ದರೆ ಸಸ್ಪೆಂಡ್ ಆಗಬೇಕಾಗುತ್ತದೆ ಎಂದು ಎಚ್ಚರಿಸಿದ ಬಳಿಕ ಪಕ್ಕದಲ್ಲೇ ಇದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಈ ಬಗ್ಗೆ ನಿಗಾ ವಹಿಸಿ ಸುಧಾರಣೆ ಕಾಣದಿದ್ದರೆ ಡಿಹೆಚ್ಒ ಅವರನ್ನು ಮುಲಾಜಿಲ್ಲದೆ ಸಸ್ಪೆಂಡ್ ಮಾಡಿ ಎಂದು ಸೂಚಿಸಿದರು.
ಶಿಕ್ಷಣದಲ್ಲೂ ಕುಸಿತ
ಉಡುಪಿ ಜಿಲ್ಲೆ ಶೈಕ್ಷಣಿಕ ಸೂಚ್ಯಂಕದಲ್ಲಿ ೧೩ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಜಿಲ್ಲಾ ಶಿಕ್ಷಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಈ ಕುಸಿತ ನಿಮಗೆ ನಾಚಿಕೆ, ಬೇಸರ ತರುವುದಿಲ್ಲವೇ ಎಂದು ಪ್ರಶ್ನಿಸಿದರು. ಮುಂದಿನ ಅವಧಿ ವೇಳೆಗೆ ನಿಮ್ಮ ಮತ್ತು ಜಿಲ್ಲೆಯ ಕಾರ್ಯಕ್ಷಮತೆ ಕಾಣದಿದ್ದರೆ ನಿಮ್ಮನ್ನು ಶಾಶ್ವತವಾಗಿ ಮನೆಗೆ ಕಳಹಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ರಸ್ತೆ ಅಪಘಾತ ಸಾವು-ಸೈಬರ್ ಕ್ರೈಂ ಹೆಚ್ಚಳಕ್ಕೆ ಕ್ರಮ ವಹಿಸಲು ಸೂಚನೆ
ಜಿಲ್ಲೆಯಲ್ಲಿ ರಸ್ತೆ ಗುಂಡಿಗಳು, ಅಪಘಾತ ಮತ್ತು ಸಾವುಗಳ ಪ್ರಮಾಣ ಹೆಚ್ಚಳ ಹಾಗೂ ಸೈಬರ್ ಅಪರಾಧಗಳ ಹೆಚ್ಚಳ ಬಗ್ಗೆಯೂ ಜಿಲ್ಲಾ ರಕ್ಷಣಾಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿಗಳು ಏನೇನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು. ಸೂಕ್ತ ಉತ್ತರ ಬರದಿದ್ದಾಗ ಪೊಲೀಸ್ ಇಲಾಖೆಯ ಜವಾಬ್ದಾರಿ, ಇದನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಎಂದು ಲೋಕೋಪಯೋಗಿ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

 

 

Leave a Reply

Your email address will not be published. Required fields are marked *