ಸುಳ್ಳು ಆರೋಪಗಳಿಗೆ ಉತ್ತರ ನೀಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯ

 

ಸುಳ್ಳು ಆರೋಪಗಳಿಗೆ ಉತ್ತರ ನೀಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ನವರು ಕೌರವ ಸಂಸ್ಕೃತಿಯನ್ನು ನನ್ನ ಬಳಿ ತೋರಿಸುವುದು ಬೇಡ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಉತ್ತರಿಸುತ್ತಾ, ಕುಮಾರಸ್ವಾಮಿಯವರು ಎಂದಿಗೂ ತಾವು ಮಾಡಿರುವ ಆರೋಪಗಳನ್ನು ಸಾಬೀತು ಪಡಿಸಿಲ್ಲ. ದ್ವೇಷ ಹಾಗೂ ಅಸೂಯೆಯ ರಾಜಕಾರಣ ಮಾಡುತ್ತಿದ್ದಾರೆ. 38 ಸ್ಥಾನದಲ್ಲಿದ್ದ ಜೆಡಿಎಸ್ ನವರು ಈಗ 19 ಸ್ಥಾನಕ್ಕೆ ಇಳಿದಿದ್ದಾರೆ. ಅವರು ಮಾಡುವ ಸುಳ್ಳು ಆರೋಪಗಳಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದರು.

 

ಮೈಸೂರು ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದ್ದು, ಚುನಾವಣೆ ನಡೆಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

 

 

 

*ಚಿಕ್ಕದಾದರೂ ಅಪರಾಧ ಅಪರಾಧವೇ :*

ಪೆನ್ ಡ್ರೈವ್ ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಯಿಸಿ, ಅವರ ಪೆನ್ ಡ್ರೈವ್ ಹೇಳಿಕೆಯ ನಂತರ ವಿಧಾನಸಭೆ ಅಧಿವೇಶನ ನಡೆದರೂ, ಅದರ ಬಗ್ಗೆ ಅವರು ಪ್ರಸ್ತಾಪ ಮಾಡಲಿಲ್ಲವೇಕೆ? ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಮನವಿ ಮಾಡಿದವರು ಯಾರು ಎಂಬ ಮಾಹಿತಿಯನ್ನು ನೀಡಲಿ. ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ವಿದ್ಯುತ್ ಕಳವು ಮಾಡಿರುವ ಕುಮಾರಸ್ವಾಮಿಯವರಿಗೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆಯೂ ಇಲ್ಲ. ದಂಡ ಕಟ್ಟುವ ಮೂಲಕ ವಿದ್ಯುತ್ ಕಳುವು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಚಿಕ್ಕದಾದರೂ ಅಪರಾಧ ಅಪರಾಧವೇ ಎಂದರು.

*ರಾಜ್ಯಾಧ್ಯಕ್ಷರ ನೇಮಕದಿಂದ ಬಿಜೆಪಿಯ ನಾಯಕರಲ್ಲಿ ಅಸಮಧಾನ :*

ಇಂದು ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಯಡಿಯೂರಪ್ಪನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರ ಪಕ್ಷದ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿಯನ್ನು ಎಲ್ಲರೂ ನೋಡಬಹುದು ಎಂದರು.

Leave a Reply

Your email address will not be published. Required fields are marked *