ಬಸವ ಮೂರ್ತಿ ಮಾದಾರ ಚನ್ನಯ್ಯ ಶ್ರೀಗಳಿಗೆ ಗೌರವ ಡಿ ಲಿಟ್ ಪುರಸ್ಕಾರ

ರಾಜ್ಯ

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವತಿಯಿಂದ ನೀಡುವಂತ ಗೌರವ ಡಿ.ಲಿಟ್ ಪುರಸ್ಕಾರಕ್ಕೆ ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಪಾತ್ರರಾಗಿದ್ದಾರೆ.

 

 

ಜೂ. ೧೪ ರಂದು ನಡೆಯಲಿರುವ ಹತ್ತನೆಯ ಹಾಗೂ ಹನ್ನೊಂದನೆಯ ದೀಕ್ಷಾಂತ ಘಟಿಕೋತ್ಸವದಲ್ಲಿ ಭಾಗವಹಿಸಲಿರುವ ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಶ್ರೀಗಳಿಗೆ ೨೦೨೧೨೨ನೇ ಸಾಲಿನ ಗೌರವ ಡಿ.ಲಿಟ್ ಪದವಿಯನ್ನು ಪ್ರಧಾನ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವರು, ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ. ಎಂ.ಸಿ. ಸುಧಾಕರ್, ಕುಲಪತಿಗಳಾದ ಡಾ. ಎಸ್. ಅಹಲ್ಯಾ, ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಂಸ್ಕೃತ ವಿದ್ವಾಂಸರಾದ ಡಾ. ಹೆಚ್.ವಿ. ನಾಗರಾಜರಾವ್ ಭಾಗವಹಿಸಲಿದ್ದಾರೆ

ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವತಿಯಿಂದ ನೀಡುವಂತ ಗೌರವ ಡಿ.ಲಿಟ್ ಪುರಸ್ಕಾರಕ್ಕೆ ಪಾತ್ರರಾಗಿರುವುದಕ್ಕೆ ಶ್ರೀ ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಶ್ರೀಗಳು, ಭೋವಿ ಗುರುಪೀಠದ  ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ  ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಈಡಿಗ ಗುರುಪೀಠದ ಶ್ರೀ ರೇಣುಕಾನಂದ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಕುಂಬಾರ ಗುರುಪೀಠದ ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಶಿವಶಕ್ತಿ ಗುರುಪೀಠದ ಶ್ರೀ ಬಸವಪ್ರಸಾದ ಸ್ವಾಮೀಜಿ, ಪಾರಮಾರ್ಥಿಕ ಗವಿಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಕೊರಟಗೆರೆ ಅನ್ನಪೂರ್ಣೇಶ್ವರಿ ಮಠದ ಶ್ರೀ ಬಸವ ಮಹಾಲಿಂಗ ಸ್ವಾಮೀಜಿ, ಬಸವಕಲ್ಯಾಣ ಶ್ರೀ ಸತ್ಯಕ್ಕ ತಾಯಿಯವರು ಶುಭ ಕೋರಿದ್ದಾರೆ.

Leave a Reply

Your email address will not be published. Required fields are marked *