ನಿರ್ಮಿತಿ ಕೇಂದ್ರದ ಹಗರಣ ಸಿಓಡಿ ಗೆ ವಹಿಸಲು ಶಿಫಾರಸು : ಕೆಡಿಪಿ ಸಭೆಯಲ್ಲಿ‌ ತೀರ್ಮಾನ

ರಾಜ್ಯ

ನಿರ್ಮಿತಿ ಕೇಂದ್ರದ ಹಗರಣ ಸಿಓಡಿ ಗೆ ವಹಿಸಲು ಶಿಫಾರಸು : ಕೆಡಿಪಿ ಸಭೆಯಲ್ಲಿ‌ ತೀರ್ಮಾನ

 

 

ಚಿತ್ರದುರ್ಗ ನಿರ್ಮಿತಿ ಕೇಂದ್ರದಲ್ಲಿ ಈ ಹಿಂದಿನ ಯೋಜನಾ ನಿರ್ದೇಶಕರ ಅವಧಿಯಲ್ಲಿ ಆಗಿರುವ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಒಡಿ ಗೆ ವಹಿಸಲು ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತಾಡಿದರು.

ನಿರ್ಮಿತಿ ಕೇಂದ್ರದ ಈಗಿನ ಯೋಜನಾ ನಿರ್ದೇಶಕ ಹರೀಶ್ ಮಾತನಾಡಿ, ನಿರ್ಮಿತಿ ಕೇಂದ್ರದ ಮೂಲಕ ಒಂದು ಸಾವಿರಕ್ಕೂ ಹೆಚ್ಚು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಹಿಂದಿನ ಅಧಿಕಾರಿಗಳ ಅವಧಿಯಲ್ಲಿ ಭೌತಿಕವಾಗಿ ನಡೆದಿರುವ ಕಾಮಗಾರಿ ಗಿಂತಲೂ ಹೆಚ್ಚಿನ ಹಣವನ್ನು ಪಾವತಿಸಿರುವುದು ಹಾಗೂ ಖರ್ಚು ಮಾಡಿರುವುದು ಕಂಡುಬಂದಿದೆ.  ಈಗಾಗಲೆ ಈ ಕುರಿತ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲಿಸಲಾಗಿದೆ ಎಂದರು.  ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *