ಬಿಜೆಪಿಯಿಂದ ಡಿಸಿ ಕಚೇರಿ ಮುತ್ತಿಗೆ ಯತ್ನ: ಬಿಜೆಪಿ ರಾಜ್ಯಾದ್ಯಕ್ಷರ ಬಂಧನ

ರಾಜ್ಯ

ವಾಲ್ಮೀಕಿ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಕೇಸರಿ ಪಡೆ ಪಟ್ಟು 

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಯತ್ನ 

 

ಬೇರೆ ರಾಜ್ಯಗಳ ಲೋಕಸಭೆ ಚುನಾವಣೆಗೆ ಕರ್ನಾಟಕವನ್ನು ಎಟಿಎಂ ಆಗಿ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿಗೆ ಹಣ ಕೊಡಬೇಕು. ನಿಗಮ ಹಣವನ್ನು ಬಳಕೆ ಮಾಡಿಕೊಂಡಿರುವುದು ಸಿಎಂ ಗಮನಕ್ಕೆ ಬರದೆ ಇರಲು ಸಾಧ್ಯ ಇಲ್ಲ. ಸಚಿವ ಶರಣ ಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ಬಸವರಾಜ ದದ್ದಲ್ ಹೆಸರು ಇದೆ. ಸ್ವತಃ ಮುಖ್ಯಮಂತ್ರಿ ಕೂಡಾ ಇದರಲ್ಲಿ ಭಾಗಿಯಾಗಿದ್ದಾರೆ.ಎಲ್ಲರೂ ರಾಜೀನಾಮೆ ಕೊಡಬೇಕುಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

 

ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಬಿಜೆಪಿ ಹಮ್ಮಿಕೊಂಡಿದ್ದ ವಾಲ್ಮಿಕೀ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ .ವಿಜಯೇಂದ್ರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ರಾಜ್ಯ ಸರ್ಕಾರ ನಿರಂತರ ಭ್ರಷ್ಟಾಚಾರದಲ್ಲಿ ತೊಡಗಿದೆ. ಅಭಿವೃದ್ಧಿ ನಿಂತು ಹೋಗಿದೆ. ಬಿಜೆಪಿ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿ ಅಧಿಕಾರಕ್ಕೆ ಬಂದವರು, ಅಭಿವೃದ್ಧಿಯನ್ನೇ ಮರೆತಿದ್ದಾರೆಎಂದ ಅವರು, ರಾಜ್ಯದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ರೀತಿಯ ಭ್ರಷ್ಟಾಚಾರ ನಡೆದಿಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಆಂಧ್ರದ ಲೋಕಸಭಾ ಚುನಾವಣೆಗೆ ಹಣ ಬಳಕೆ ಮಾಡಲಾಗಿದೆ. ಬಾರ್ನಲ್ಲಿ ಕುಳಿತು ಕುಡಿದ ಬಿಲ್ ಅನ್ನು ಸಹ ವಾಲ್ಮೀಕಿ ನಿಗಮದ ಹಣದಲ್ಲಿ ಕೊಟ್ಟಿದ್ದಾರೆಎಂದು ವಾಗ್ದಾಳಿ ನಡೆಸಿದರು.

 

`ಯಡಿಯೂರಪ್ಪ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಥಾಪಿಸಿ ನೂರಾರು ಕೋಟಿ ಅನುದಾನ ನೀಡಿದರು. ಸಮಾಜದ ಬಡ ಮಕ್ಕಳು, ಹಿಂದುಳಿದವರ ಅಭಿವೃದ್ಧಿಗೆ ಮೀಸಲಿಟ್ಟಿದ್ದರು. ಆದರೆ, ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ಸಚಿವರಾಗಿದ್ದ ನಾಗೇಂದ್ರ ರಾಜೀನಾಮೆ ಪಡೆಯಲಾಗಿದೆ. ಇದು ನಾಗೇಂದ್ರ ಒಬ್ಬರ ತಪ್ಪಲ್ಲ. ಮುಖ್ಯಮಂತ್ರಿ ಆರ್ಥಿಕ ಸಚಿವರ ಗಮನದಲ್ಲೇ ಪ್ರಕರಣ ನಡೆದಿದೆಎಂದು ದೂರಿದ ಅವರು, ಪಕ್ಕದ ಆಂಧ್ರಪ್ರದೇಶದ ಚುನಾವಣೆಗೆ ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಹೋಗಿದೆ ಎಂದು ಆಪಾದಿಸುತ್ತಿರುವ ಬಿಜೆಪಿ, ಹಗರಣದಲ್ಲಿ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆದು ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆದಿದೆ. ಆದರೆ, ಎಲ್ಲವೂ ಮುಖ್ಯಮಂತ್ರಿಗಳ ಕಣ್ಣೋಟದಲ್ಲೇ ನಡೆದಿದ್ದು, ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಲಾಯಿತು

 

ರಾಜ್ಯದಲ್ಲಿ ಭೀಕರ ಬರಗಾಲ ಬಂದಾಗ ರೈತರಿಗೆ ಸರ್ಕಾರ ಸ್ಪಂದಿಸಿಲ್ಲ. ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಆಗಿದೆ. ಇದಕ್ಕೆ ತಕ್ಕ ಪ್ರಾಯಶ್ಚಿತ್ತ ಆಗಬೇಕು. ಲೆಕ್ಕಾಧಿಕಾರಿ ಚಂದ್ರಶೇಖರ್ ಬರೆದಿದ್ದ ಡೆತ್ನೋಟ್ನಲ್ಲಿ ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದಾರೆ. ಲೋಕಸಭೆ ಚುನಾವಣೆಗೆ ಹಣ ಕೊಡಲು ಕಾಂಗ್ರೆಸ್ ಹೈಕಮಾಂಡ್ ಒತ್ತಡವಿತ್ತು. ಹಾಗಾಗಿ ಬೇರೆ ನಿಗಮಗಳಲ್ಲೂ ಅವ್ಯವಹಾರ ಆಗಿದೆ. ಎಸ್ಇಪಿ, ಟಿಎಸ್ಪಿ ಅನುದಾನವೂ ದುರ್ಬಳಕೆ ಆಗಿದೆ. ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಮಂತ್ರಿಗಳೆಲ್ಲರೂ ರಾಜೀನಾಮೆ ಕೊಡಬೇಕುಎಂದು ಒತ್ತಾಯಿಸಿದರು.

 

 

 

ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಮಾತನಾಡಿ, `ವಾಲ್ಮೀಕಿ ನಿಗಮದ 187 ಕೋಟಿ ರೂ.ಗಳನ್ನು ಆಂಧ್ರಪ್ರದೇಶದ ಚುನಾವಣೆಗೆ ಕಳಿಸಿದ್ದಾರೆ. ಅನೇಕ ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿದ್ದಾರೆ. ಬಿಟ್ಟಿ ಭಾಗ್ಯ ಕೊಟ್ಟು ಹೆಣ್ಣು ಮಕ್ಕಳನ್ನು ಮರುಳು ಮಾಡಿ ಈಗ ಬೆಲೆ ಹೆಚ್ಚಿಸಿದ್ದಾರೆ. ಸಂಪನ್ಮೂಲ 60 ಸಾವಿರ ಕೋಟಿ ಬೇಕು. ಅದಕ್ಕೆ ನಾಯಕರ ದುಡ್ಡೇ ಬೇಕಾ. ಬಡವರು, ಬೋರ್ವೆಲ್ ಹಾಕಿಸುವ ಹಣ ನುಂಗಿದರೂ ಒಬ್ಬ ಶಾಸಕರು ಪ್ರಶ್ನೆ ಮಾಡಿಲ್ಲ. ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕುಎಂದು ಆಗ್ರಹಿಸಿದರು.

 

ಸಂದರ್ಭದಲ್ಲಿ ಜಿಲ್ಲಾ ಅದ್ಯಕ್ಷರಾದ ಮುರಳಿ,ಹನುಮಂತೆಗೌಡ ಶಾಸಕರಾದ ಎಂ ಚಂದ್ರಪ್ಪ, ಎಸ್ ಟಿ ಮೊರ್ಚಾ ರಾಜ್ಯದ್ಯಕ್ಷ ಬಂಗಾರು ಹನುಮಂತು, ವಿಧಾನ ಪರಿಷತ್ ಸದಸ್ಯ ಕೆ.ಎಸ್ ನವೀನ್, ಮಾಜಿ ಶಾಸಕರಾದ ತಿಪ್ಪಾರೆಡ್ಡಿ, ನೇರಲಗುಂಟೆ ತಿಪ್ಪೇಸ್ವಾಮಿ, ರಾಮಚಂದ್ರಪ್ಪ, ಮುಖಂಡರಾದ ಎಸ್ ಲಿಂಗಮೂರ್ತಿಉಮೇಶ ಕಾರಜೋಳ ಜಿ.ಎಸ್. ಅನಿತ್ಕುಮಾರ್, ಡಾ,ಸಿದ್ದಾರ್ಥ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಸಿದ್ದಾಪುರ್, ಜಿ.ಎಸ್ ಸಂಪತ್ಕುಮಾರ್,ರಾಜ್ಯ ರೈತ ಮೊರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಶ ಬುರುಡೆ ಕಟ್ಟೆ, ಮಾಧುರಿಗೀರೀಶ್, ಕೆ.ಟಿ.ಕುಮಾರಸ್ವಾಮಿ, ಲಕ್ಷ್ಮೀಕಾಂತ್, ನವೀನ್ ಚಾಲುಕ್ಯ, ಶ್ರೀಮತಿ ಸೌಭಾಗ್ಯ ಬಸವರಾಜನ್, ನರೇಂದ್ರಹೊನ್ನಾಳ್. ಜಯಪಾಲ್ ಕೆ. ಮಲ್ಲಿಕಾರ್ಜು£.ವೆಂಕಟೇಶ್ ಯಾದವ. ದಗ್ಗೆ ಶಿವಪ್ರಕಾಶ್. ನಾಗರಾಜ್ ಬೇಂದ್ರೆನಂದಿನಾಗರಾಜ್. ರಾಮು, ಸೀತಾರಾಮ ರೆಡ್ಡಿಮಂಡಲ ಅದ್ಯಕ್ಷರಾದ ಡಾ ಮಂಜುನಾಥ್. ವಿಶ್ವನಾಥ್ಸೂರನಹಳ್ಳಿ ಶ್ರಿನಿವಾಸ್. ಶಿವಣ್ಣ, ವೀರೇಶ ಜಾಲಿಕಟ್ಟೆಗೂಳಿಹಟ್ಟಿ ಜಗದೀಶ್.ಅಶೋಕ.ಸರಸ್ವತಿ.ಶೀಲಾ.ಕಾಂಚನ,ಕವನಸೇರಿದಂತೆ ಸಾವಿರಾರು ಪಧಾದಿಕಾರಿಗಳು ಕಾರ್ಯಕರ್ತರು ಹೋರಾಟದಲ್ಲಿ ಪಾಲ್ಗೊಂಡಿದ್ದರು.

 

 

ಡಿಸಿ ಸರ್ಕ ಲ್ ನಲ್ಲಿ ಪೊಲೀಸ್ ಸರ್ಪಗಾವಲು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ನಿರ್ಧರಿಸಿದ ಹಿನ್ನಲೆಯಲ್ಲಿ ನಗರದ ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು ಒನಕೆ ಓಬವ್ವ ವೃತ್ತಕ್ಕೆ ಬಂದು ಸೇರುವ ಎಲ್ಲ ರಸ್ತೆಗಳಲ್ಲಿ ಪೊಲೀಸರು ನಾಕಾಬಂದಿ ನಿರ್ಮಾಣ ಮಾಡಲಾಗಿತ್ತು. ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಎಲ್ಲ ಅಗತ್ಯ ಸಿದ್ಧತೆಗಳನ್ನು ಒನಕೆ ಓಬವ್ವ ವೃತ್ತದಲ್ಲಿ ಮಾಡಿಕೊಂಡಿದ್ದಾರೆ.

 

ಸ್ಥಳದಲ್ಲಿ ನೂರಾರು ಪೊಲೀಸರು ಬೀಡು ಬಿಟ್ಟಿದ್ದಾರೆ. ಸಾಕಷ್ಟು ಬ್ಯಾರಿಕೇಡ್ ಅಳವಡಿಸಿದ್ದು,. ಅಹಿತಕರ ಘಟನೆ ನಡೆಯದಂತೆ ತಡೆಯಲು ಸ್ಥಳದಲ್ಲೇ ಫೈಯರ್ ಇಂಜಿನ್ ಮತ್ತು ಅಂಬುಲೈನ್ಸ್ ಸಹಾ ತಯಾರಿತ್ತುಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ಯಲು 4 ಸಾರಿಗೆ  ಬಸ್ಸುಗಳು, ಪೊಲೀಸ್ ಟಿಟಿ ವಾಹನ, ಜೀಪ್ಗಳನ್ನು ತರಲಾಗಿತ್ತು. ಜಿಲ್ಲಾಧಿಕಾರಿಗಳ ಕಚೇರಿಗೆ ಹೋಗುವವರಿಗೂ ಸಹಾ ಪ್ರತಿಭಟನೆ ತೊಂದರೆಯನ್ನು ಮಾಡಿತ್ತು ಪ್ರತಿಭಟನೆ ಮುಗಿಯುವವರೆಗೂ ಸಾರ್ವಜನಿಕರನ್ನು ಕಚೇರಿಯ ಒಳಗೆ ಹೋಗಲು ಪೋಲಿಸರು ಬಿಡಲಿಲ್ಲ, ಕಚೇರಿ ಕೆಲಸಕ್ಕೆ ಹೋಗದೇ ತೊಂದರೆಯನ್ನು ಮಾಡಿದ್ದರಿಂದ ಜನತೆ ಪ್ರತಿಭಟನಾಕಾರರನ್ನು ಬೈಯುತ್ತಾ ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು

 

ನಗರದ ಮದಕರಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯ ಕಡೆಗೆ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಬಂದ ಬಿಜೆಪಿ ಕಾರ್ಯಕರ್ತರ ಪಡೆಯಲ್ಲಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ರವರ ಭಾಷಣದ ನಂತರ ಜಿಲ್ಲಾಧಿಕಾರಿ ಕಚೇರಿಯನ್ನು ಮುತ್ತಿಗೆ ಹಾಕಲು ಪ್ರಯತ್ನ ನಡೆಯಿತು, ಇದರಲ್ಲಿ ಮಧುಗಿರಿ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ಮತ್ತು ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ್ ಯಾದವ್ ಪೋಲಿಸರು ಹಾಕಿದ್ದ ಬ್ಯಾರಿಕೇಟಿಂಗ್ ಮೇಲೆ ಹತ್ತಿ ಡಿಸಿ ಕಚೇರಿಯ ಒಳಗಡೆ ಹೋಗಲು ಪ್ರಯತ್ನ ನಡೆಸಿದರು ಮಧ್ಯೆ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಸಹಾ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನವನ್ನು ನಡೆಸಿದರು. ಸಂದರ್ಭದಲ್ಲಿ ಪೋಲಿಸರು ಬಿಗಿಯಾದ ಭದ್ರತೆಯನ್ನು ಮಾಡಿ ಕಾರ್ಯಕರ್ತರ ಪ್ರಯತ್ನವನ್ನು ವಿಫಲಗೂಳಿಸಿದರು. ಮಧ್ಯೆ ರಾಜ್ಯಾಧ್ಯಕ್ಷರಾಧ ವಿಜಯೇಂದ್ರ ಶಾಸಕರಾದ ಎಂ.ಚಂದ್ರಪ್ಪ, ಮುಖಂಡರಾದ ಡಾ.ಸಿದ್ದಾರ್ಥ, ರಘುಚಂದನ್, ಜಯಪಾಲಯ್ಯ, ಶಿವಣ್ಣಾಚಾರ್ರವರು ಪೋಲಿಸ್ ಭದ್ರತೆಯನ್ನು ಮುರಿಯಲು ಯತ್ನ ಮಾಡಿದರು. ಪ್ರತಿಭಟನೆಯ ಹಿನ್ನಲೆಯಲ್ಲಿ ಪ್ರತಿಭಟನಾಕಾರರು ತಮ್ಮ ಎಡಗೈಗೆ ಕಪ್ಪು ಪಟ್ಟಿಯನ್ನು ಕಟ್ಟಿಕೊಂಡಿದ್ದರು.

Leave a Reply

Your email address will not be published. Required fields are marked *