ಭೋವಿ ಅಭಿವೃದ್ದಿ ನಿಗಮ‌ ಸುಲಿಗೆ ಕೇಂದ್ರವಲ್ಲ

ರಾಜ್ಯ

ಪಕ್ಷಾತೀತವಾಗಿ ಸಮಾಜವನ್ನು ಸಂಘಟಿಸಬೇಕು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಹೇಳಿದರು.
ನಗರದ ಹೊರವಲಯದಲ್ಲಿರುವ ಭೋವಿ ಗುರುಪೀಠದಲ್ಲಿ ಭಾನುವಾರ ನಡೆದ ದೀಕ್ಷಾ ರಜತ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜವನ್ನು ಎಲ್ಲಾ ಪಕ್ಷದ ಸಮಾಜದ ಬಾಂಧವರು ಸೇರಿ ಸಂಘಟಿಸುವುದರೊಟ್ಟಿಗೆ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಜುಲೈ 20 ರಂದು ನಡೆಸಬೇಕು ಎಂದರು. ರಾಜಕೀಯ ಶಕ್ತಿ ಹೆಚ್ಚಿಸಿಕೊಳ್ಳಬೇಕು, ಭೋವಿ ನಿಗಮ ಕಟ್ಟ ಕಡೆಯ ಭೋವಿ ವ್ಯಕ್ತಿಯನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶ ಹೊಂದಿದೆ ಎಂದರು.
ಶ್ರೀಗಳ ಪರಿಶ್ರಮದಿಂದ ಭೋವಿ ಸಮಾಜ ಸಂಘಟನಾ ಸಮಾಜವಾಗಿ ಹೊರಹೊಮ್ಮಿದೆ. ಸರ್ಕಾರದಲ್ಲಿ ರಾಜಕಾರಣಿಗಳ ಮಾತಿಗಿಂತ ಶ್ರೀಗಳ ಮಾತಿಗೆ ಹೆಚ್ಚು ಮೌಲ್ಯವಿದೆ. ಸಮಾಜಕ್ಕೆ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಶ್ರೀಗಳ ಸಂಘಟನಾ ಶಕ್ತಿ ಪರಿಣಾಮಕಾರಿಯಾಗಿದೆ. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ರಾಜಕೀಯ ಪ್ರಮುಖರು, ಶ್ರೀಗಳ ಬಳಿ ಬರುತ್ತಿದ್ದಾರೆ.
ಶ್ರೀಗಳ ಜೊತೆಗಿನ ಪ್ರವಾಸದಲ್ಲಿ ಅವರ, ಸಹನೆ, ತಾಳ್ಮೆ, ಜಾಣ್ಮೆ, ಚಾಕಚಕ್ಯತೆ, ಚುರುಕುತನ ತಿಳಿದುಕೊಂಡಿದ್ದು, ನನ್ನ ಬದುಕಿನಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇನೆ.ಶ್ರೀಮಠಕ್ಕೂ ನಾವು ಕಾಳಜಿ ವಹಿಸಬೇಕು ಎಂದರು.
ಭೋವಿ ಅಭಿವೃದ್ಧಿ ನಿಗಮ ಸುಲಿಗೆ ಕೇಂದ್ರವಲ್ಲ, ಸುಧಾರಣಾ ಕೇಂದ್ರವಾಗಿ ಪರಿವರ್ತಿಸುವೆ. ಸೌಲಭ್ಯ ಪಡೆಯದವರಿಗೆ ಸೌಲಭ್ಯ ಕಲ್ಪಿಸಲಾಗುವುದು, ಬಿ.ಜೆ.ಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಅಧ್ಯಕ್ಷರನ್ನು ನೇಮಕ ಮಾಡಲಿಲ್ಲ, ಅಧಿಕಾರಿಗಳ ದರ್ಪದಿಂದ ನಿಗಮದಲ್ಲಿ ಅವ್ಯವಸ್ಥೆಯಾಗಿದೆ. ಎಸ್.ಐ.ಟಿ ತನಿಖೆಯಿಂದ ಸತ್ಯ ತಿಳಿಯುತ್ತದೆ ಎಂದರು.
ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಶ್ರೀ ತಿಪ್ಪೇಸ್ವಾಮಿ ಮಾತನಾಡಿ, ಯಾವ ಪಕ್ಷದಿಂದಲೂ ಸಂಸತ್ ಚುನಾವಣೆಗೆ ಜಿಲ್ಲೆಯಲ್ಲಿ ಟಿಕೆಟ್ ಸಿಗದಿರುವುದಕ್ಕೆ ಒಗ್ಗಟ್ಟಿನ ಕೊರತೆ ಕಾರಣ. ಟಿಕೆಟ್ ಬೇಕಾದಾಗ ಎಲ್ಲರೂ ಬರುತ್ತಾರೆ, ನಂತರ ಯಾರು ಸೇರುವುದಿಲ್ಲ ಸ್ವಾಮೀಜಿಯವರಿಂದ ಮಾತ್ರ ಸಮಾಜವನ್ನು ಒಗ್ಗಟ್ಟಾಗಿ ಸಂಘಟಿಸಲು ಸಾಧ್ಯವಾಗಿದೆ.ರಾಜಕಾರಣಿಗಳು ಸಮಾಜವನ್ನು ಕೈಹಿಡಿದೆತ್ತುವ ಕೆಲಸ ಮಾಡಬೇಕೆಂದರು.
ಸೂರಗೊಂಡನಹಳ್ಳಿ ಕೃಷ್ಣಮೂರ್ತಿ ಮಾತನಾಡಿ ಸಂಕಷ್ಟದಲ್ಲಿರುವವರನ್ನು ಸಂತೈಸುವ ಸಂತ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ. ಸ್ತ್ರೀ ಸಂಕುಲವನ್ನು ಜಾಗೃತಿ ಮೂಡಿಸೋಣ, ಹೋರಾಟದ ಪಥದಲ್ಲಿರುವ ಗುರುಗಳಿಗೆ ರಕ್ಷ ಕವಚವಾಗಿ ಸಂಘ ಸಂಸ್ಥೆಯ ಮುಖಂಡರು ನಿಲ್ಲಬೇಕು. ಸಕುಟುಂಬ ಸಮೇತರಾಗಿ ದೀಕ್ಷಾ ಮಹೋತ್ಸವದಲ್ಲಿ ಭಾಗವಹಿಸಲು ಪ್ರೇರಣಾ ನೀಡುವ ಜಾಗೃತಿ ಯಾತ್ರೆ ಮಾಡೋಣ ಎಂದರು.ಜಾಗೃತಿ ಮೂಡಿಸುವ ಕೆಲಸ ಮಾಡದಿದ್ದರೆ ಸಂಘಟನಾ ಮನೋಭಾವ ಇಲ್ಲದಾಗುತ್ತದೆ ಎಂದು ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ತಿಳಿಸಿದರು.

 

 

ಸಮುದಾಯದ ಜನತೆಗೆ ಸಂಘಟನೆಯನ್ನು ಮೂಡಿಸಿದರೆ ರಾಜಕೀಯವಾಗಿ ತೀಕ್ಷ್ತೆಯನ್ನು ಬೆಳೆಸಿಕೊಳ್ಳುತ್ತಾರೆ. ಚಿಕ್ಕ ಸಭೆಗಳೇ ಬೃಹತ್ ಸಭೆಗಳಾಗಿ ಹೊರಹೊಮ್ಮುತ್ತವೆ ಹಾಗಾಗಿ ಸಂಘಟನೆಯನ್ನು ನಿರಂತರವಾಗಿ ಮಾಡಬೇಕು ಎಂದು ಹೇಳಿದರು.
ಜನರು ವಿಧಾನಸಭೆಯ ಹೊರಗೆ ಧ್ವನಿ ಎತ್ತಬೇಕು, ಜನಪ್ರತಿನಿಧಿಗಳು ವಿಧಾನಸಭೆಯ ಒಳಗೆ ಸಮಾಜದ ಧ್ವನಿಯಾದಾಗ ಮಾತ್ರ ಸಂಘಟನೆಯಾದಂತೆ ಎನ್ನುವುದನ್ನು ಪ್ರತಿಯೊಬ್ಬರು ಅರಿಯಬೇಕು ಎಂದರು. ಸಂಘಟನೆ ಜನರ ಜೊತೆ ಇರಬೇಕು ಆಗ ಗಟ್ಟಿಯಾಗುತ್ತದೆ ಹಾಗೂ ಜನರ ಜೊತೆ ಸದಾಕಾಲ ಸಧೃಢವಾಗಿ ಉಳಿಯಲು ಮತ್ತು ಬದುಕಲು ಅವಕಾಶ ಒದಗಿಸುತ್ತದೆ. ಸಮಾಜ ಸಂಘಟನೆಯ ಬಗ್ಗೆ ನಿರಂತರ ಯೋಜನೆ ಮತ್ತು ಸಮಾಲೋಚನೆ ಮಾಡಬೇಕು. ಆರ್ಥಿಕವಾಗಿ ಸಬಲತೆ ಇರುವ ಸಮಾಜಕ್ಕೆ ಗೌರವ ಹೆಚ್ಚು ಹಾಗಾಗಿ ಶಿಕ್ಷಣ, ಆರ್ಥಿಕ ಸಬಲತೆಗೆ ಹೆಚ್ಚು ಮಹತ್ವ ಕೊಡಬೇಕು, ಸಮಾಜಕ್ಕೆ ಅವಶ್ಯಕವಾದ ಹಕ್ಕುಗಳನ್ನು ಪೂರೈಕೆಗೆ ಸದಾಕಾಲ ಸಂಘಟಿತರಾಗಬೇಕು ಎಂದು ಹೇಳಿದರು.ಹೊಸದುರ್ಗ ಚಂದ್ರಪ್ಪ,
ಹೊಳಲ್ಕೆರೆ ಮಾಸ್ಟರ್ ರಂಗಪ್ಪ ಮಾತಾಡಿದರು.
ವೇದಿಕೆಯಲ್ಲಿ ಎಸ್.ಜೆ.ಎಸ್ ವಿದ್ಯಾಸಂಸ್ಥೆಯ ನಿರ್ದೇಶಕ ವಿ.ಹನುಮಂತಪ್ಪ ಗೋಡೆಮನೆ, ಇ.ಮಂಜುನಾಥ, ಹೆಚ್.ಆಂಜನೇಯ, ಹೊಸದುರ್ಗದ ಸುಬ್ಬಯ್ಯ, ರಾಮಚಂದ್ರಪ್ಪ, ಮಂಜಪ್ಪ, ಎನ್.ಪಿ.ಭರತ್, ಚಂದ್ರಶೇಖರ್, ಉಮೇಶ್, ಭೂತಭೋವಿ, ಭೋವಿ ಗುರುಪೀಠದ ಸಿ.ಇ.ಓ ಗೌನಹಳ್ಳಿ ಗೋವಿಂದಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಿನ ಮುಖಂಡರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *