ಜಿಟಿಟಿಸಿಯಲ್ಲಿ ಡಿಪ್ಲೋಮಾ ಮಾಡುವುದರಿಂದ ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗದ ಅವಕಾಶ ಹೆಚ್ಚು: ಡಿ‌ಸಿ ವೆಂಕಟೇಶ್

ರಾಜ್ಯ

ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಚಳ್ಳಕೆರೆ ಹಾಗೂ ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಸಹಯೋಗದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಪಿಯುಸಿ, ಐಟಿಐ ಕಾಲೇಜಿನ ಪ್ರಾಂಶುಪಾಲರು, ಜಿಟಿಟಿಸಿ ಕಾಲೇಜಿನ ಪ್ರಾಂಶುಪಾಲರ ಸಭೆ ನಡೆಯಿತು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಜಿಲ್ಲೆಯ ಬಯಲುಸೀಮೆಯಾಗಿದ್ದು, ಆರ್ಥಿಕತೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಜಿಟಿಟಿಸಿಯಲ್ಲಿ ಡಿಪ್ಲೊಮಾ ಕೋರ್ಸ್ಗಳನ್ನು ಮಾಡುವುದರಿಂದ ಹೆಚ್ಚಿನ ಕೌಶಲ್ಯ ಪಡೆದು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗಾವಕಾಶ ಪಡೆಯಬಹುದು. ಸ್ವಂತ ಕೈಗಾರಿಕೆ ಪ್ರಾರಂಭಿಸಬಹುದು. ಹೊರ ದೇಶಗಳಲ್ಲಿಯೂ ಈ ಸಹ ಈ ಕೋರ್ಸ್ಗೆ ಬಹಳ ಬೇಡಿಕೆ ಇದ್ದು, ನಿರುದ್ಯೋಗ ಸಮಸ್ಯೆ ಅಳಿಸಬಹುದು ಎಂದು ತಿಳಿಸಿದರು.
ಜಿಟಿಟಿಸಿ ಕೇಂದ್ರದ ಉಪ ವ್ಯವಸ್ಥಾಪಕ ಎಸ್.ಲಕ್ಷ್ಣ್ ನಾಯ್ಕ್ ಮಾತನಾಡಿ, ಪಿಯುಸಿಅನುತ್ತೀರ್ಣರಾದ ವಿದ್ಯಾರ್ಥಿಗಳು ಜಿಟಿಟಿಸಿ ಪ್ರವೇಶ ಪಡೆಯಬಹುದು. ಪಿಯುಸಿ ವಿಜ್ಞಾನ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜಿಟಿಟಿಸಿ ಕೋರ್ಸ್ಗಳಿಗೆ 2ನೇ ವರ್ಷಕ್ಕೆ ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶಾತಿ ಕಲ್ಪಿಸಲಾಗಿದೆ. ಜಿಟಿಟಿಸಿ ಕೇಂದ್ರದಲ್ಲಿ ಟೂಲ್ ಮತ್ತು ಡೈ ಮೇಕಿಂಗ್, ಮೆಕಾಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಎಂಜಿನಿಯರಿಂಗ್, ಡಿಪ್ಲೋಮಾ ಇನ್ ಪ್ರೀಸಿಸನ್ ಮ್ಯಾನ್ಯುಪ್ಯಾಕ್ಚರಿಂಗ್ ಈ ಕೋರ್ಸ್ಗಳಿಗೆ ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಪ್ರವೇಶಾತಿ ಪಡೆಯಬಹುದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಚಳ್ಳಕೆರೆ ಜಿಟಿಟಿಸಿ ಕೇಂದ್ರದ ಪ್ರಾಂಶುಪಾಲ ತಿಪ್ಪೇಸ್ವಾಮಿ, ಚಿತ್ರದುರ್ಗ ಜಿಟಿಟಿಸಿ ಕೇಂದ್ರ ಪ್ರಾಂಶುಪಾಲ ಸುಹಾಸ್, ಆಡಳಿತಾಧಿಕಾರಿ ಕೆ.ಪಿ.ಕಾಟೇಗೌಡ ಹಾಗೂ ಜಿಲ್ಲೆಯ ಐಟಿಐ ಹಾಗೂ ಪಿಯು ಕಾಲೇಜಿನ ಪ್ರಾಂಶುಪಾಲರು ಇದ್ದರು.

 

 

Leave a Reply

Your email address will not be published. Required fields are marked *