ಹಿರಿಯೂರಿನಲ್ಲಿ ವ್ಯಕ್ತಿ ಯೊಬ್ಬರ ಗಮನ ಬೇರೆಡೆಗೆ ಸೆಳೆದು 10ಲಕ್ಷ ರೂಪಾಯಿ ದೋಚಿರುವ ಘಟನೆ ನಗರ ಠಾಣೆ ವ್ಯಾಪ್ರಿಯಲ್ಲಿ ನಡೆದಿದೆ.
ಹಣ ಕಳೆದುಕೊಂಡಿರುವ ವ್ಯಕ್ತಿಯು ಹಿರಿಯೂರಿನ ಮುಖ್ಯ ರಸ್ತೆಯಲ್ಲಿರುವ ಎಸ್ ಬಿಐ ಬ್ಯಾಂಕಿನಲ್ಲಿ ಬೆಳಗ್ಗೆ 10 ಲಕ್ಷ ಹಣವನ್ನು ಡ್ರಾ ಮಾಡಿಕೊಂಡು ಬೈಕ್ ನಲ್ಲಿ ಚಾನಲ್ ರಸ್ತೆಯಲ್ಲಿರುವ ಮನೆಗೆ ತೆರಳಿದ್ದಾರೆ. ಇದನ್ನು ಗಮನಿಸಿದ ದುಷ್ಕರ್ಮಿಗಳು ಅವರನ್ನು ಹಿಂಬಾಲಿಸಿಕೊಂಡು ಹೋಗಿ ಮನೆಯ ಬಳಿ ಅವರ ಗಮನ ಬೇರೆಡೆಗೆ ಸೆಳೆದು ಹಣ ದೋಚಿ ಪರಾರಿಯಾಗಿದ್ದಾರೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ.