ಚಿತ್ರದುರ್ಗ 72ಕೋವಿಡ್ ಪಾಸಿಟಿವ್ ಪ್ರಕರಣಗಳಿ

ಆರೋಗ್ಯ ಜಿಲ್ಲಾ ಸುದ್ದಿ

ಚಿತ್ರದುರ್ಗ, ನವಂಬರ್09:(ಸಂವಾ)- ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 72 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,874 ಕ್ಕೆ ಏರಿಕೆಯಾಗಿದ್ದು, ಒಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.

 

 

Chitradurga 72 covid positive
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 58 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಮವಾರ ಒಟ್ಟು 1508 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 72 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 12,874ಕ್ಕೆ ಏರಿಕೆಯಾಗಿದೆ. ಒಟ್ಟು 61 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 12,300 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 512 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,01,766 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 1,25,881 ಜನರ ಮಾದರಿ ಸಂಗ್ರಹಿಸಲಾಗಿದ್ದು, 1,12,407 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 108 ಜನರ ವರದಿ ಬರುವುದು ಬಾಕಿ ಇದೆ. 492 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.
ಸಂಯುಕ್ತವಾಣಿ

ಡಿ.ಕುಮಾರಸ್ವಾಮಿ

Leave a Reply

Your email address will not be published. Required fields are marked *