ಜುಲೈ 20ರಂದು ಉಚಿತ ಬೂಸ್ಟರ್ ಲಸಿಕೆ 

ಆರೋಗ್ಯ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಜುಲೈ 20 ರಂದು ಬೆಳಗ್ಗೆ 10:30ಕ್ಕೆ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ 18 ರಿಂದ 59 ವರ್ಷದೊಳಗಿನವರಿಗೆ ಉಚಿತ ಬೂಸ್ಟರ್ ಲಸಿಕೆ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
18 ರಿಂದ 59 ವರ್ಷದೊಳಗಿನ ಒಟ್ಟು 672467 ಫಲಾನುಭವಿಗಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

 

 


ಒಟ್ಟು ಲಸಿಕಾ ಕೇಂದ್ರಗಳು:1 ಜಿಲ್ಲಾಸ್ಪತ್ರೆ, 5 ಸಾರ್ವಜನಿಕ ಆಸ್ಪತ್ರೆ, 11 ಸಮುದಾಯ ಆರೋಗ್ಯ ಕೇಂದ್ರಗಳು, 81 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 5 ನಗರ ಆರೋಗ್ಯ ಕೇಂದ್ರಗಳು, 343 ಉಪಕೇಂದ್ರಗಳಲ್ಲಿ ಉಚಿತವಾಗಿ ಕೋವಿಡ್ ಬೂಸ್ಟರ್ ಲಸಿಕೆಯನ್ನು ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ

Leave a Reply

Your email address will not be published. Required fields are marked *