ಶಾಸಕರಿಂದ 9.5 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

ಜಿಲ್ಲಾ ಸುದ್ದಿ

ನಾನು ಶಾಸಕರಾದ ಮೇಲೆ ಬದ್ಧತೆಯಿಂದ ಕೆಲಸ ಮಾಡುತ್ತಿದ್ದೇನೆ ಅದರಲ್ಲೂ ರಸ್ತೆ ಸೇರಿದಂತೆ ಮೂಲ ಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದೇನೆ ಎಂದು ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಅವರು ತಿಳಿಸಿದರು.

 

 


ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಟು ಯಲ್ಲದಕೆರೆ ರಸ್ತೆಗೆ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಈ ರಸ್ತೆ ಸುಮಾರು 25ಕಿಮಿ ಉದ್ದ ಇದ್ದು, ಗ್ರಾಮೀಣ ರಸ್ತೆ ಆಗಿತ್ತು. ಸಾರ್ವಜನಿಕ ದೃಷ್ಟಿಯಿಂದ ರಸ್ತೆಯನ್ನು ಮೇಲ್ದರ್ಜೆಗೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಅದರಂತೆ ಸರ್ಕಾರ ಸದರಿ ರಸ್ತೆಯನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಮೇಲ್ದರ್ಜೆಗೇಸಿದ್ದು, ಇಂದು ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ ರವರು ರೂ.9.5 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವೀರವ್ವನಾಗತಿಹಳ್ಳಿಯಲ್ಲಿ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *