BREKING NEWS
ಕೋಟೆ ನಾಡಿನಲ್ಲಿ ಜಿಟಿ ಜಿಟಿ ಮಳೆಯಿಂದಾಗಿ ಹಳವುದರ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಅದೃಷ್ಟವಶಾತ್ ಅಂಬಿಕಾ ಎನ್ನುವ ಮಹಿಳೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ಮನೆಯಲ್ಲಿ ರಾತ್ರಿ ಮಲಗಿದ ವೇಳೆಯಲ್ಲಿ ಘಟನೆಯು ನಡೆದಿದೆ. ಗೋಡೆ ಕುಸಿದ ರಭಸಕ್ಕೆ ಮಹಿಳೆ ತೀವ್ರವಾಗಿ ಅಸ್ವಸ್ಥಳಾಗಿದ್ದಾರೆ. ಅಂಬಿಕಾಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಘಟನಾ ಸ್ಥಳಕ್ಕೆ ತಾಲೂಕು ಕಚೇರಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.