ಎಸ್ಸಿ ಎಸ್ಟಿ ಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಮುಂದುವರೆಸಿ

ರಾಜ್ಯ

ಕರ್ನಾಟಕ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಬಿಪಿಎಲ್ ಕಾರ್ಡ್ ದಾರರಿಗೆ ಉಚಿತವಾಗಿ 75 ಯೂನಿಟ್ ಗಳನ್ನು ನೀಡಲಾಗಿತ್ತು, ಆದರೆ ರಾಜ್ಯ ಬಿಜೆಪಿ ಸರ್ಕಾರ ಸದರಿ ಸುತ್ತೋಲೆಯನ್ನು ಹಿಂಪಡೆದಿದೆ. ಇದರಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಬಡತನ ರೇಖೆಗಿಂತ ಕೆಳಗಿರುವ ವರಿಗೆ ತುಂಬಾ ತೊಂದರೆಯಾಗಿದೆ ಎಂದು ಕೆಪಿಸಿಸಿ ಮಾಧ್ಯಮ‌ ವಕ್ತಾರ ಜಿಬಿ ಬಾಲಕೃಷ್ಣ ಸ್ವಾಮಿ ಯಾದವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರ ಯೋಜನೆಯನ್ನು ಹಿಂದಕ್ಕೆ ಪಡೆದಿರುವುದು ಪರಿಶಿಷ್ಟ ಜಾತಿ ಮತ್ತು ವರ್ಗದ ಜನರಿಗೆ ತೊಂದರೆಗೀಡು ಮಾಡಿದ್ದು, ಇದರಿಂದ ಈ ಸರ್ಕಾರ ಬಡವರ ವಿರೋಧಿ ಸರ್ಕಾರ ಎಂಬುದಾಗಿ ಸಾಬೀತಾಗಿದೆ ಅನೇಕ ಶ್ರೀಮಂತರಿಗೆ ವಿದ್ಯುತ್ ಬಿಲ್ ಗಳನ್ನು ಮನ್ನಾ ಮಾಡಲಾಗಿದೆ ಆದರೆ 75 ಯೂನಿಟ್ ಗಳ ಉಚಿತ ಯೋಜನೆಯನ್ನು ರದ್ದು ಗೊಳಿಸಿರುವುದು ಪರಿಶಿಷ್ಟ ಜಾತಿ ವರ್ಗದ ಬಡವರಿಗೆ ಅನ್ಯಾಯ ಮಾಡಿದಂತಾಗಿದೆ ಇದನ್ನು ಕಾಂಗ್ರೆಸ್ ಪಕ್ಷ ಉಗ್ರವಾಗಿ ಖಂಡಿಸುತ್ತದೆ ಕೂಡಲೇ ರಾಜ್ಯ ಸರ್ಕಾರ ಹಿಂದೆ ಇದ್ದ ಯೋಜನೆಯನ್ನು ಮುಂದುವರಿಸದಿದ್ದಲ್ಲಿ ಕಾಂಗ್ರೆಸ್ ರಾಜ್ಯಾದ್ಯಂತ ಉಗ್ರವಾದ ಪ್ರತಿಭಟನೆಯನ್ನು ಹಮ್ಮಿಕೊಳ್ಳುತ್ತದೆ ಸರ್ಕಾರದ ಈ ನಿರ್ಧಾರದಿಂದ ಭಾಗ್ಯಜ್ಯೋತಿ ಕುಟೀರ ಜ್ಯೋತಿಯೋಜನೆಗಳ ಅಡಿಯಲ್ಲಿ ಇರುವ ಬಿಪಿಎಲ್ ಕಾರ್ಡ್ ದಾರರಿಗೆ ವಂಚನೆ ಮಾಡಿದಂತಾಗುತ್ತದೆ ಇಲ್ಲದೇ ಹೋದಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯದ ಬಿಪಿಎಲ್ ಕಾರ್ಡುದಾರರು ತಮಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜಿಬಿ ಬಾಲಕೃಷ್ಣ ಸ್ವಾಮಿ ಯಾದವ್ ಹೇಳಿದ್ದಾರೆ.

 

 

Leave a Reply

Your email address will not be published. Required fields are marked *