ಒಂದು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಅಂಗನವಾಡಿ ಕಾಮಗಾರಿ ಬಗೆ ಹರಿಸಿದ ತಹಶೀಲ್ದಾರ್

ಜಿಲ್ಲಾ ಸುದ್ದಿ

ಒಂದು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಅಂಗನವಾಡಿ ಕಟ್ಟಡದ ವಿವಾದ ಬಗೆಹರಿಸಿದ ತಹಶೀಲ್ದಾರ್

 

 

ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ 16 ಲಕ್ಷ ರೂ ವೆಚ್ಚದ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸರ್ಕಾರದಿಂದಲೂ ಕೂಡ ಅನುದಾನ ಒದಗಿಸಿದ್ದು ಈ ಕಟ್ಟಡ ನಿರ್ಮಾಣ ಮಾಡಲು ಸ್ಥಳೀಯವಾಗಿ ಕೆಲವು ಪಂಚಾಯಿತಿ ಸದಸ್ಯರು ಸೇರಿಕೊಂಡು ಅಡ್ಡಿಪಡಿಸಿದ್ದು ಇದಕ್ಕೆ ಶಿಶು ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ ಇವರು ತಹಶೀಲ್ದಾರ್ ಅವರಿಗೆ ಮನವಿ ಮಾಡಿ ಕಟ್ಟಡದ ಕಾಮಗಾರಿಪ್ರಾರಂಭಿಸಲು ಆಗಿರುವ ತೊಂದರೆ ನಿವಾರಿಸಲು ಮನವಿ ಮಾಡಿದ್ದು, ಶಿಶು ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಲವು ಬಾರಿ ವಿವಾದವನ್ನು ಬಗೆಹರಿಸಲು ಗ್ರಾಮಕ್ಕೆ ಬಂದಾಗಲೂ ಕೂಡ ಕೆಲವರು ಅಡ್ಡಿಪಡಿಸಿ ಕೆಲಸ ನಿಲ್ಲಿಸಿದ್ದರು ಇಂದು ತಹಶೀಲ್ದಾರ್ ಮತ್ತು ಕಂದಾಯ ಇಲಾಖೆ ಸಿಬ್ಬಂದಿಗಳು ಶಿಶು ಅಭಿವೃದ್ಧಿ ಅಧಿಕಾರಿಗಳು ಮತ್ತು ನಿರ್ಮಿತಿ ಕೇಂದ್ರದ ಅಧಿಕಾರಿಗಳೊಂದಿಗೆ ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ ಎಲ್ಲರೊಂದಿಗೆ ಸಮಾಲೋಸಿಚಿ ಸರ್ಕಾರದ ಅನುದಾನ ಬಳಕೆಯಾಗದಿದ್ದಲ್ಲಿ ಗ್ರಾಮದ ನಾಗರೀಕರಿಗೆ ಹೆಚ್ಚಿನ ನಷ್ಟವಾಗಲಿದ್ದು ಸರ್ಕಾರದಯೋಜನೆಗಳಿಗೆ ಅಡ್ಡಿಪಡಿಸುವುದು ಸರಿಯಲ್ಲ, ಹಾಗೆ ಈ ನಿಟ್ಟಿನಲ್ಲಿ ಯಾರಾದರೂ ಅಡ್ಡಿಪಡಿಸಿದರೆ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದು ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಟ್ಟು ಅಂಗನವಾಡಿ ಕಟ್ಟಡದ ಕಾಮಗಾರಿಯನ್ನ ಪ್ರಾರಂಭಿಸಿದರು ಇದೇ ಸಂದರ್ಭದಲ್ಲಿ ಶಿಶು ಅಭಿವೃದ್ದಿ ಅಧಿಕಾರಿಯಾದ ಕೃಷ್ಣಪ್ಪ ರಾಜಸ್ವ ನಿರೀಕ್ಷಕ ಲಿಂಗೇಗೌಡ ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರುಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *