ಅಕ್ಷರ ಮಾಂತ್ರಿಕ ರವಿಬೆಳೆಗೆರೆ ಅಸ್ತಂಗತ

ಜಿಲ್ಲಾ ಸುದ್ದಿ

ಬೆಂಗಳೂರು: ಹಾಯ್ ಬೆಂಗಳೂರು ವಾರಪತ್ರಿಕೆ ಪ್ರಧಾನ ಸಂಪಾದಕ, ಹಿರಿಯ ಪತ್ರಕರ್ತ ರವಿ ಬೆಳೆಗೆರೆ (62) ನ.12 ರ ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
1958 ರ ಮಾರ್ಚ್ 15 ರಂದು ಬಳ್ಳಾರಿಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಪತ್ರಿಕೋದ್ಯಮ ವೃತ್ತಿಗೆ ಧುಮುಕಿ ಯಶಸ್ಸಿನ ಉತ್ತುಂಗಕ್ಕೇರಿದ್ದವರು.Chitradurga akshara mantrika ravibelegere astangata
ಹಾಯ್ ಬೆಂಗಳೂರ್ ವಾರಪತ್ರಿಕೆ ಹಾಗೂ ‘ಓ ಮನಸೇ’ ಪಾಕ್ಷಿಕ ಪತ್ರಿಕೆಯ ಸಂಪಾದಕರಾಗಿದ್ದರು. ಜೊತೆಗೆ ಅವರು ಕನ್ನಡ ಸಾಹಿತಿ, ಚಿತ್ರಕಥೆ ಬರಹಗಾರ, ಈ-ಟಿವಿ ಕನ್ನಡ ವಾಹಿನಿಯ ಜನಪ್ರಿಯ ಕ್ರೈಂ ಡೈರಿ ಕಾರ್ಯಕ್ರಮದ ನಿರೂಪಕರಾಗಿ ಹಾಗೂ ಜನಶ್ರೀ ವಾಹಿನಿಯ ಮುಖ್ಯಸ್ಥರಾಗಿ, ಕಾರ್ಯಕ್ರಮಗಳ ನಿರೂಪಕರಾಗಿ ಕಾರ್ಯ ನಿರ್ವಹಿಸಿದ್ದರು. ಅಷ್ಟೆ ಅಲ್ಲದೆ ಚಲನಚಿತ್ರಗಳಲ್ಲೂ ನಟಿಸಿ ಮನ್ನಣೆ ಪಡೆದಿದ್ದರು. ಕಲರ್ಸ್ ಕನ್ನಡದ ನಟ ಸುದೀಪ್ ನಡೆಸಿಕೊಡುತ್ತಿದ್ದ ಬಿಗ್ ಬಾಸ್ ಕಾರ್ಯಕ್ರಮದಲ್ಲೂ ಭಾಗವಹಿಸಿ ಜನರನ್ನು ರಂಜಿಸಿದ್ದರು.
ಕನ್ನಡದಲ್ಲಿ ಹಲವಾರು ಪುಸ್ತಕಗಳನ್ನು ಬರೆದಿರುವ ಮತ್ತು ಭಾಷಾಂತರಿಸಿರುವ ರವಿ ಬೆಳಗೆರೆ, ಭಾವನಾ ಪ್ರಕಾಶನ, ಭಾವನಾ ಆಡಿಯೋ ರೀಚ್ ಮತ್ತು ಪ್ರಾರ್ಥನಾ ಶಾಲೆಯ ಸಂಸ್ಥಾಪಕರು, ಹಾಯ್ ಬೆಂಗಳೂರ್’ ಪತ್ರಿಕೆ ಪ್ರಾರಂಭಿಸುವ ಮುನ್ನ ಕರ್ಮವೀರ, ಸಂಯುಕ್ತ ಕರ್ನಾಟಕ ಮತ್ತು ಕಸ್ತೂರಿ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು.
ರವಿ ಬೆಳೆಗೆರೆ ಅವರ ಬಾಟಮ್ ಐಟಮ್, ಖಾಸ್ ಬಾತ್ ಅಂಕಣಗಳು ಅತ್ಯಂತ ಜನಪ್ರಿಯ. ಹಿಮಾಗ್ನಿ, ನೀನಾ ಪಾಕಿಸ್ತಾನ? ಡಿ ಕಂಪನಿ, ದಂಗೆಯ ದಿನಗಳು ಸೇರಿದಂತೆ ಅನೇಕ ಜನಪ್ರಿಯ ಕೃತಿಗಳನ್ನು ರಚಿಸಿದ್ದರು.
ಪತ್ರಿಕೋದ್ಯಮದಲ್ಲಿ ಸಾಧನೆ ಮಾಡಿದ್ದ ರವಿ ಬೆಳೆಗೆರೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ. ರವಿ ಬೆಳೆಗೆರೆ ಅವರು ಸ್ಥಾಪಿಸಿರುವ ಪ್ರಾರ್ಥನಾ ಶಾಲೆಯ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಚಿತ್ರದುರ್ಗ ಜಿಲ್ಲೆಗೂ ಕೂಡ ಅವರ ಸಂಬಂಧ ಅವಿನಾಭಾವದ್ದಾಗಿತ್ತು. ಚಳ್ಳಕೆರೆ ತಾಲೂಕಿನ ಬೆಳೆಗೆರೆ ಕೃಷ್ಣ ಶಾಸ್ತ್ರಿಗಳ ಸ್ವತಃ ಅಳಿಯನೂ (ಸಹೋದರಳಿಯ)ಆಗಿದ್ದು ಬೆಳೆಗೆರೆ ಕೃಷ್ಣ ಶಾಸ್ತ್ರಿಗಳ ಅಸ್ತಂಗತರಾಗಿದ್ದ ದಿನ ಕೂಡ ಅವರೇ ಅಂತಿನ ವಿಧಿ ವಿಧಾನಗಳನ್ನು ಕೂಡ ಮುಗಿಸಿದ್ದರು. ನಂತರ ಶಾಸ್ತ್ರಿಗಳು ನಡೆಸುತ್ತಿದ್ದ ಬಿ. ಸೀತಾರಾಮ ಶಾಸ್ತ್ರಿ ಸಂಯುಕ್ತ ಪದವಿ ಪೂರ್ವ ಕಾಲೇಜ್ ಹಾಗೂ ಶಾರದ ಮಂದಿರ ಪ್ರೌಢ ಶಾಲಾ ಸಂಸ್ಥೆ ಗೆ ರವಿಬೆಳೆಗೆ ಅವರು ಅಧ್ಯಕ್ಷರಾಗಿದ್ದರು.
ಸಂಯುಕ್ತವಾಣಿ
ಡಿ.ಕುಮಾರಸ್ವಾಮಿ

 

 

Leave a Reply

Your email address will not be published. Required fields are marked *