ಜಿಲ್ಲೆಯಲ್ಲಿ 55 ಜನರಿಗೆ ಕೋವಿಡ್ ಸೋಂಕು ದೃಢ

ಆರೋಗ್ಯ ಜಿಲ್ಲಾ ಸುದ್ದಿ

ಜಿಲ್ಲೆಯಲ್ಲಿ 55 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 12,541ಕ್ಕೆ ಏರಿಕೆ
ಚಿತ್ರದುರ್ಗ, ನವಂಬರ್.04:(ಸಂವಾ)-ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 55 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,541 ಕ್ಕೆ ಏರಿಕೆಯಾಗಿದೆ.ಜಿ

 

 

ಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 69 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.ಬುಧವಾರ ಒಟ್ಟು 1911 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 55 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 12,541ಕ್ಕೆ ಏರಿಕೆಯಾಗಿದೆ. ಒಟ್ಟು 60 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 12,042 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 438 ಸಕ್ರಿಯ ಪ್ರಕರಣಗಳು ಇವೆ.ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 97,878 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 1,15,903 ಜನರ ಮಾದರಿ ಸಂಗ್ರಹಿಸಲಾಗಿದ್ದು, 1,02,079 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 791 ಜನರ ವರದಿ ಬರುವುದು ಬಾಕಿ ಇದೆ. 492 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ

ಸಂಯುಕ್ತವಾಣಿ ಡಿ.ಕುಮಾರಸ್ವಾಮಿ

Leave a Reply

Your email address will not be published. Required fields are marked *