ಬೆಂಗಳೂರು: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಅವರ ಜೊತೆ ಇದ್ದ ನವೀನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನ ಜೆಪಿ ನಗರದಲ್ಲಿ ಬೈಕ್ ನಲ್ಲಿ ಸಂಚಾರಿ ವಿಜಯ್ ಹಾಗೂ ಸ್ನೇಹಿತ ನವೀನ್ ಅವರ ಬೈಕ್ ಸ್ಕಿಡ್ ಆಗಿ ಅಪಘಾತಕ್ಕೀಡಾಗಿದೆ. ಅದರಲ್ಲಿ ಶಿರಸ್ತ್ರಾಣ ಧರಿಸದೆ ಇದ್ದುದರಿಂದ. ನಟ ಸಂಚಾರಿ ವಿಜಯ್ ಅವರ ತಲೆಗೆ ಗಂಭೀರ ಗಾಯವಾಗಿತ್ತು. ನವೀನ್ ಅವರಿಗೆ ಬೆನ್ನಿಗೆ ಗಂಭೀರ ಗಾಯವಾಗಿದ್ದು, ಇಬ್ವರು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗಿತ್ತು. ವಿಜಯ್ ಅವರು ಆಸ್ಪತ್ರೆಗೆ ದಾಖಲಾದಾಗಿನಿಂದ ಕೋಮದಲ್ಲಿಯೇ ಇದ್ದರು. ಇಂದು ಬೆಳಗ್ಗೆ ಅವರ ಬ್ರೈನ್ ಹ್ಯಾಮರೇಜ್ ಆಗಿದ್ದು, ಅವರಿಗೆ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿತ್ತ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ಬಪ್ಪಿದ್ದಾರೆ.
ಸಂಯುಕ್ತವಾಣಿ