1 ರಿಂದ 8 ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ರದ್ದು ಖಂಡನೆ

ಜಿಲ್ಲಾ ಸುದ್ದಿ

 

1 ರಿಂದ 8 ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ರದ್ದು

ವಿದ್ಯಾರ್ಥಿವೇತನವನ್ನು ಮುಂದುವರಿಸಲು ಬಂಜಾರ ವಿಧ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಕಾಶ್ ರಾಮಾನಾಯ್ಕ್ ಆಗ್ರಹ.

 

 

ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಲ್ಲಿ ಬರುವ 1 ರಿಂದ 8 ನೇ ತರಗತಿಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನವನ್ನು ಈ ವರ್ಷದಿಂದ ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡ ಕೇಂದ್ರ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ.

1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳು ಆರ್ಟಿಇ ಅಡಿಯಲ್ಲಿ ಬರುವ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪಡೆಯುತ್ತಿದ್ದು, ಅವರಿಗೆ ಸ್ಕಾಲರ್ಶಿಪ್ ನ ಅಗತ್ಯತೆ ಬೀಳುವುದಿಲ್ಲ ಹಾಗಾಗಿ ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ, ಮೂಲಭೂತ ಹಕ್ಕಾದ 2009 ಆರ್ಟಿಇ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಸಹಕಾರಿಯಾಗುವ ಸ್ಕಾಲರ್ಶಿಪ್ ಅನ್ನು ಹೆಚ್ಚುವರಿ ಸವಲತ್ತು ಎಂಬಂತೆ ಬಿಂಬಿಸುವುದು ತಪ್ಪಾಗುತ್ತದೆ, ದೇಶದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಕೌಟುಂಬಿಕ ಆರ್ಥಿಕ ಮಟ್ಟ ಕಡಿಮೆ ಇರುವುದರಿಂದ ಸರಕಾರಿ ಶಾಲೆಗಳಲ್ಲಿಯೇ ಮೆಟ್ರಿಕ್ ಪೂರ್ವ ವಿದ್ಯಾಭ್ಯಾಸವನ್ನು ಕಲಿಯುತ್ತಾರೆ, ದೇಶದ ಬಹಳಷ್ಟು ಜನ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಗಳ ಮೇಲೆ ಅವಲಂಬಿತವಾಗದೆ ವಿದ್ಯಾರ್ಥಿವೇತನದ ಸಹಾಯ ಪಡೆದು ವಿದ್ಯಾರ್ಥಿ ವೇತನದ ಮೇಲೆ ಅವಲಂಬಿತವಾಗಿ ಶಿಕ್ಷಣ ಪಡೆಯುತ್ತಿದ್ದಾರೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿವೇತನವು 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣದಿಂದ ದೂರ ಉಳಿಯಬಾರದು ಎಂಬ ಆಶಯವನ್ನು ಹೊಂದಿದೆ ಅದಕ್ಕಾಗಿ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತಿದೆ ಎಂಬುದನ್ನು ಸರ್ಕಾರ ಮರೆತಿರುವುದು ದುರಂತ, ಇದೊಂದು ಬಡವರ, ರೈತರ, ಕಾರ್ಮಿಕ, ಶೋಷಿತ ಸಮುದಾಯದ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ದೂರ ಇರಿಸುವ ಹುನ್ನಾರ ಎಂಬಂತೆ ಕಾಣಿಸುತ್ತಿದೆ.
ಈ ರೀತಿಯ ಆಲೋಚನೆಯನ್ನು ಕೇಂದ್ರ ಸರ್ಕಾರ ಈ ಕೂಡಲೇ ಕೈ ಬಿಡಬೇಕು ಒಂದು ವೇಳೆ ಈ ನಿರ್ಧರ ಹಿಂಪಡೆಯಲಿಲ್ಲ ಅಂದರೆ ಇಡೀ ರಾಜ್ಯಾದ್ಯಂತ ಹಲವು ವಿಧ್ಯಾರ್ಥಿ ಸಂಘಟೆಗಳಿಂದ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಬಂಜಾರ ಸಂಘದ ಜಿಲ್ಲಾ ಅಧ್ಯಕ್ಷರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *