ಬೆಸ್ಕಾಂ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ

ಜಿಲ್ಲಾ ಸುದ್ದಿ

 

ಬೆಸ್ಕಾಂ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ

ಭಾರತ ಸರ್ಕಾರ ವಿದ್ಯುತ್ ಕ್ಷೇತ್ರದಲ್ಲಿ ಮಹತ್ತರ ಕ್ರಾಂತಿಕರ ಬದಲಾವಣೆ ತಂದಿದೆ. ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದೆ. ವಿತರಣಾ ವ್ಯವಸ್ಥೆ ಹಾಗೂ ಗ್ರಾಹಕರ ಸೇವೆಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಬೆಸ್ಕಾಂ ನೌಕರರು ನಿರಂತರ ಹಗಲು ರಾತ್ರಿ, ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿದ್ದಾರೆ. ಬೆಸ್ಕಾಂ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಹೇಳಿದರು.

 

 

ಕೇಂದ್ರ ಸರ್ಕಾರದ ಹೊಸ ಮತ್ತು ನವೀಕರಿಸಬಹುದಾದ ಇಂಧನಗಳ ಸಚಿವಾಲಯ, ವಿದ್ಯುತ್ ಸಚಿವಾಲಯ ಹಾಗೂ ಬೆಸ್ಕಾಂ ಸಂಯುಕ್ತ ಆಶ್ರಯದಲ್ಲಿ ನಗರದ ತರಾಸು ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಲಾದ ಉಜ್ವಲ ಭಾರತ, ಉಜ್ವಲ ಭವಿಷ್ಯ, ವಿದ್ಯುತ್ @ 2047 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸ್ವಾತಂತ್ರೋತ್ಸವ 75 ವರ್ಷಾಚರಣೆ ಸಂದರ್ಭದಲ್ಲಿ ಸರ್ಕಾರ ಪ್ರತಿ ಇಲಾಖೆಗಳ ಸಾಧನೆಯನ್ನು ಆಜಾದಿ ಕಾ ಅಮೃತ ಮಹೋತ್ಸ ಕಾರ್ಯಕ್ರಮ ಆಯೋಜಿಸಿ ಅನಾವರಣ ಗೊಳಿಸಲಾಗುತ್ತಿದೆ. ಕಳೆದ 8 ವರ್ಷದಲ್ಲಿ ವಿದ್ಯುತ್ ಸಂಪರ್ಕ ಹೊಂದಿರದ 18374 ಹಳ್ಳಿಗಳಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ನಿರಂತರವಾಗಿ ದೊರಕುತ್ತಿದೆ. ಇದರಿಂದ ಕೃಷಿ ಹಾಗೂ ಕೈಗಾರಿಕೆಗಳ ಉತ್ತೇಜನೆಗೆ ಇಂಬು ದೊರೆತಿದೆ. ಇಂಗಾಲ ರಹಿತ, ನವೀಕರಿಸಬಹುದಾದ ಇಂಧನ ಮೂಲಗಳ ಮೂಲಕ ವಿದ್ಯುತ್ ಉತ್ಪಾದನೆ ಸರ್ಕಾರ ಸಾಕಷ್ಟು ಸವಲತ್ತುಗಳನ್ನು ನೀಡುತ್ತಿದೆ. ಇವುಗಳನ್ನು ಜನರಿಗೆ ತಲುಪಿಸುವ ಕಾರ್ಯ ಬೆಸ್ಕಾಂ ಮಾಡಬೇಕು ಎಂದರು

Leave a Reply

Your email address will not be published. Required fields are marked *