ಎಸ್ಸಿ ಎಸ್ಟಿಗಳಿಗೆ ಉಚಿತ ವಿದ್ಯುತ್ ಯೋಜನೆ ಹಿಂಪಡೆದ ಸರ್ಕಾರ

ರಾಜ್ಯ

BIG BREAKING

ಎಸ್ಸಿ ಎಸ್ಟಿಗೆ ಉಚಿತ ವಿದ್ಯುತ್ ಯೋಜನೆ ಹಿಂಪಡೆದ ಸರ್ಕಾರ: ಬಿಗ್ ಶಾಕ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಡತನ ರೇಖೆಗಿಂತ ಕೆಳಗಿರುವಂತ ಬಿಪಿಎಲ್ ಪಡಿತರ ಚೀಟಿದಾರ ಎಸ್ಸಿ, ಎಸ್ಟಿ ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್ ನೀಡೋದಾಗಿ ಘೋಷಣೆ ಮಾಡಿತ್ತು. ಇದೀಗ ಈ ಯೋಜನೆಯನ್ನು ಹಿಂಪಡೆದು, ಬಿಗ್ ಶಾಕ್ ನೀಡಿದೆ.

 

 

ಈ ಕುರಿತಂತೆ ರಾಜ್ಯ ಸರ್ಕಾರದ ಇಂಧನ ಇಲಾಖೆ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಭಾಗ್ಯಜ್ಯೋತಿ, ಕುಟೀರಜ್ಯೋತಿ ಒಳಗೊಂಡಂತೆ 75 ಯುನಿಟ್ ಮಾಸಿಕ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿತ್ತು ಎಂದಿದ್ದಾರೆ.

ಈ ಯೋಜನೆಯ ಸಂಬಂಧ ಸರ್ಕಾರದಿಂದ ಹೊರಡಿಸಿದ್ದಂತ ಸುತ್ತೋಲೆಯನ್ನು, ಈ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂಬುದಾಗಿ ಆದೇಶಿಸಿದ್ದಾರೆ. ಈ ಮೂಲಕ 75 ಯುನಿಟ್ ಉಚಿತ ವಿದ್ಯುತ್ ಯೋಜನೆಯನ್ನು ರಾಜ್ಯ ಸರ್ಕಾರ ಹಿಂಪಡೆದು, ಎಸ್ಸಿ, ಎಸ್ಟಿ ಸಮುದಾಯದವರಿಗೆ ಬಿಗ್ ಶಾಕ್ ನೀಡಿದೆ

Leave a Reply

Your email address will not be published. Required fields are marked *