ಕೇಂದ್ರ ಸಂಘಕ್ಕೆ ಜಂಟಿ‌ ಕಾರ್ಯದರ್ಶಿ ಆಯ್ಕೆ

ಜಿಲ್ಲಾ ಸುದ್ದಿ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೇಂದ್ರ ಶಾಖೆಗೆ ಜಂಟಿ ಕಾರ್ಯದರ್ಶಿಯಾಗಿ ಹೊಸದುರ್ಗ ತಾಲೂಕಿನ ಮಾಜಿ ಅಧ್ಯಕ್ಷರು ಹಾಗೂ ಚಿತ್ರದುರ್ಗ ಜಿಲ್ಲಾ ಸಂಘದ ಗೌರವಾಧ್ಯಕ್ಷರಾದ ಎಂ ಆರ್ ಶಾಂತಪ್ಪ ಇವರನ್ನು, ಕೇಂದ್ರ ಸಂಘಕ್ಕೆ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಕ್ಷರಿ ಅವರಿಗೆ ಹಾಗೂ ಕೇಂದ್ರ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಹಾಗೂ ಜಿಲ್ಲೆಯ ಸರ್ಕಾರಿ ನೌಕರರ ಪರವಾಗಿ ಅಭಿನಂದನೆ ತಿಳಿಸಿದ್ದಾರೆ

 

 

Leave a Reply

Your email address will not be published. Required fields are marked *