ಸಿದ್ದರಾಮೋತ್ಸವ ದ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣ

ರಾಜಕೀಯ

BREAKING NEWS

ಸಿದ್ದರಾಮೋತ್ಸವ ದ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣ:

ನಾಳೆ ದಾವಣಗೆರೆಯಲ್ಲಿ ಪ್ರತಿ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ಹುಟ್ಟು ಹಬ್ಬದ ಆಚರಣೆಯ ನಡೆಯುತ್ತಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಕೂತೂಹಲವನ್ನು ಮೂಢಿಸಿದೆ.

ಈ ಕಾರ್ಯ ಕ್ರಮಕ್ಕಾಗಿ ಬಸ್ ಗಳು ಬುಕ್ ಆಗಿದ್ದು ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

 

 

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗದಿಂದ ಇದೇ ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮಕ್ಕೆ ಸುಮಾರು 200 ಬಸ್‍ಗಳನ್ನು ಕರಾರು ಒಪ್ಪಂದದ ಮೇಲೆ ಒದಗಿಸಲಾಗಿದೆ ಎಂದು ಹೇಳಿದೆ.

ಬಸ್‌ಗಳು ದಾವಣಗೆರೆಗೆ ಸಂಚಾರ ನಡೆಸುವ ಕಾರಣ ನಾಳೆ ಮತ್ತು ಮತ್ತುಆಗಸ್ಟ್‌ 4ರ ಗುರುವಾರ ವಿವಿಧೆಡೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ.
ಬಳ್ಳಾರಿ, ಸಿರುಗುಪ್ಪ, ತೆಕ್ಕಲಕೋಟೆ, ಕುರುಗೋಡು, ಕುಡಿತಿನಿ, ಕಂಪ್ಲಿ, ಸಂಡೂರು ಕಡೆಗಳಿಂದ ವಿವಿಧ ಸ್ಥಳಗಳಿಗೆ ತೆರಳುವ ಬಸ್ಸುಗಳ ದೈನಂದಿನ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಸಹಕರಿಸಲು ಮನವಿ ಮಾಡಲಾಗಿದೆ.

ಏಳು ಸಾವಿರ ಬಸ್ ಬುಕ್ ಮಾಡಲಾಗಿದೆ:
ದಾವಣಗರೆಯಲ್ಲಿ ನಡೆಯುವ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಸುಮಾರು 5 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಸಮಾವೇಶಕ್ಕೆ ಸಿದ್ದರಾಮಯ್ಯ ತವರು ಕ್ಷೇತ್ರ ಬಾದಾಮಿಯಿಂದಲೇ 25 ಸಾವಿರ ಜನರು ಆಗಮಿಸಲಿದ್ದಾರೆ. ವಿವಿಧ ಜಿಲ್ಲೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಆಗಮಿಸಲು ಸುಮಾರು 7 ಸಾವಿರ ಬಸ್‌ಗಳನ್ನು ಬುಕ್ ಮಾಡಲಾಗಿದೆ.

ಇದರಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 2ರ ರಾತ್ರಿಯಿಂದ ಆಗಸ್ಟ್ 4ರ ತನಕ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ದೂರ ಪ್ರಯಾಣ ಮಾಡುವ ಯೋಜನೆ ಹಾಕಿಕೊಂಡವರು ಒಂದು ಬಾರಿ ಯೋಚಿಸಿ ಹೊರಗೆ ಕಾಲಿಡುವುದು ಸೂಕ್ತವಾಗಿದೆ.

Leave a Reply

Your email address will not be published. Required fields are marked *