ಮಾನವ ಹಕ್ಕುಗಳಿಂದ ಯಾರೂ ವಂಚಿತರಾಗಬಾರದು:ಎನ್ ರಘುಮೂರ್ತಿ

ಜಿಲ್ಲಾ ಸುದ್ದಿ

ಮಾನವ ಹಕ್ಕುಗಳಿಂದ ಯಾರೂ ವಂಚಿತರಾಗಬಾರದು:ಎನ್ ರಘುಮೂರ್ತಿ

ಮಾನವ ಹಕ್ಕುಗಳು ಎಲ್ಲಾ ವರ್ಗಕ್ಕೂ ದೊರೆಯಬೇಕು ಯಾರು ಈ ಹಕ್ಕಿನಿಂದ ವಂಚಿತರಾಗಬಾರದು ಎಂಬುದು ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದು ತಹಶಿಲ್ದಾರ್ ಎನ್ ರಘುಮೂರ್ತಿ ವ್ಯಕ್ತಿಪಡಿಸಿದರು. ಅವರು ನಗರದ ಅಂಬೇಡ್ಕರ್ ನಗರದ ಮೆಟ್ರಿಕ್ ಪೂರ್ವ ಹಾಸ್ಟಲ್ ಆವರಣದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿ ನಂತರ ಮಾತನಾಡು. ಪ್ರತಿಯೊಬ್ಬ ಜೀವಿಯು ಯಾವುದೇ ಹಕ್ಕುಗಳಿಂದ ವಂಚಿತರಾಗಬಾರದು. ಯಾವುದೇ ಜಾತಿ ಮತ ಧರ್ಮದ ಭೇದವಿಲ್ಲದೆ ಈ ಹಕ್ಕನ್ನು ಪಡೆಯಬಹುದಾಗಿದೆ. ಪ್ರತಿಯೊಬ್ಬರು ಮಾನವ ಹಕ್ಕಿನ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗಿದೆ ವಿದ್ಯಾರ್ಥಿಗಳು ಸಂವಿಧಾನದಲ್ಲಿರುವ ಹಕ್ಕುಗಳ ಬಗ್ಗೆ ತಿಳಿದುಕೊಂಡು ಅನಕ್ಷರಸ್ಥರಿಗೂ ಸಹ ಅರಿವು ಮೂಡಿಸುವ ಗುರುತರ ಜವಾಬ್ದಾರಿಯನ್ನು ಹೊಂದಬೇಕು ಎಂದು ತಿಳಿಸಿದರು. ಇದೆ ವೇಳೆ ಮಕ್ಕಳಿಗೆ ಹಾಸ್ಟೆಲ್ ಆವರಣದಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವಂತೆ ಸಲಹೆ ನೀಡಿದರು.

 

 

ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಮಾತನಾಡಿ ಪ್ರತಿಯೊಬ್ಬ ಜೀವಿಗೂ ಬದುಕುವ ಹಕ್ಕಿದೆ ಅಧಿಕಾರ ಹಣ ಹಾಗೂ ಶ್ರೇಷ್ಠತೆಗೋಸ್ಕರ ಹಿಂತಿಸುವಂತಹ ಪ್ರವೃತ್ತಿ ಬೆಳೆಸಿಕೊಳ್ಳುತ್ತಿದ್ದಾರೆ. ನಾವೇ ಶ್ರೇಷ್ಠರು ಎಂಬ ಮನೋಭಾವನೆ ಬೆಳೆಸಿಕೊಳ್ಳುತ್ತಿದ್ದಾರೆ. ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಕೊಳ್ಳುವ ಹುನ್ನಾರ ಕೆಲವು ಪಟ್ಟಭದ್ರಾ ಹಿತಾಸಕ್ತಿಗಳು ಮಾಡುತ್ತಿವೆ ಇದರ ವಿರುದ್ಧ ಅನೇಕ ಮಹನೀಯರು ತಮ್ಮ ತ್ಯಾಗ ಬಲಿದಾನದ ಮೂಲಕ ಹೋರಾಡಿದ್ದಾರೆ. ಅವರ ಆದರ್ಶಗಳನ್ನು ಪಾಲಿಸುವ ಮೂಲಕ ದ್ವೇಷಿಸುವ ಮನೋಭಾವ ಕೈ ಬಿಟ್ಟು ಎಲ್ಲರೂ ಒಂದಾಗಿ ಸಮಾನತೆಯಿಂದ ಬದುಕುವ ಸಾಮರಸ್ಯ ಜೀವನಕ್ಕೆ ನಾಂದಿ ಹಾಡಬೇಕಿದೆ ಎಂದರು.

ನಗರ ಸಭೆ ಪೌರಾಯುಕ್ತ ಚಂದ್ರಪ್ಪ ಮಾತನಾಡಿ ಅಮೇರಿಕಾ ದಕ್ಷಿಣ ಆಫ್ರಿಕಾ ದೇಶಗಳಲ್ಲಿನ ಅಸ್ಪೃಶ್ಯತೆಯನ್ನು ಮನಗಂಡು ಅಂಬೇಡ್ಕರ್ ಮಾನವ ಹಕ್ಕುಗಳ ಬಗ್ಗೆ ವಿಸ್ತೃತವಾಗಿ ಅಧ್ಯಯನ ಕೈಗೊಂಡು ನಮ್ಮ ದೇಶದ ಸಂವಿಧಾನಕ್ಕೆ ಅಳವಡಿಸಿ ಎಲ್ಲರಿಗೂ ದೊರೆಯುವಂತೆ ಮಾಡಿದ್ದಾರೆ ಎಂದು ಸ್ಮರಿಸಿದರು.

ಬಿಇಓ ಕೆ.ಎಸ್ ಸುರೇಶ ದಲಿತ ಮುಖಂಡ ಪ್ರಕಾಶ ಮಾತನಾಡಿದರು.ಈ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಸದಸ್ಯರಾದ ಪ್ರಕಾಶ್ ಶ್ರೀನಿವಾಸ್ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದಯಾನಂದ್ ಜಯಣ್ಣ ರಾಜು ಸೇರಿದಂತೆ ಹಾಸ್ಟೆಲ್ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *