ಬಡವರ ಖಾತೆಗೆ ಪಿಂಚಣಿ ಪೋನ್ ನಲ್ಲಿ ಕೋರಿದರೂ ಪೆನ್ಷನ್ ನೀಡುತ್ತೇವೆ

ರಾಜ್ಯ

ಬಡವರ ಖಾತೆಗೂ ಪಿಂಚಣಿ: ಪೋನ್ ನಲ್ಲೂ ಕೋರಿದರೂ ಪೆನ್ಷನ್ ನೀಡುತ್ತೇವೆ: ಆರ್ ಆಶೋಕ್

ಬೆಂಗಳೂರು: ಬಡವರಿಗೆ 72 ಗಂಟೆಯೊಳಗೆ ಪಿಂಚಣಿ ಮಂಜೂರು ಮಾಡಲಾಗುವುದು. ಫೋನ್ ನಲ್ಲಿ ಕೋರಿದರೂ ದಾಖಲೆ ಪಡೆದು ಪಿಂಚಣಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

 

 

ಬಡತನ ರೇಖೆಗಿಂತ ಕೆಳಗಿರುವ ಅಸಹಾಯಕರು ಪಿಂಚಣಿ ಕೋರಿದ 72 ಗಂಟೆ ಒಳಗೆ ಪಿಂಚಣಿ ಮಂಜೂರಾತಿ ಮಾಡುವ ವ್ಯವಸ್ಥೆ ತರಲಾಗಿದೆ.

ದೂರವಾಣಿ ಮೂಲಕ ಪಿಂಚಣಿ ಕೋರಿದರೂ ಆಧಾರ್ ಕಾರ್ಡ್ ಮತ್ತು ಮನೆಯ ಫೋಟೋ ದಾಖಲೆ ಪಡೆದು ಪಿಂಚಣಿ ನೀಡಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ನ ಎಂ. ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಈಗಾಗಲೇ ಮನೆ ಬಾಗಿಲಿಗೆ ಮಾಸಾಶನ ಅಭಿಯಾನ ಜಾರಿಗೊಳಿಸಲಾಗಿದೆ. ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ಅರ್ಹ ಪಲಾನುಭವಿಗಳನ್ನು ಗುರುತಿಸಿ ನವೋದಯ ಆಪ್ ಮೂಲಕ ಪರಿಶೀಲನೆ ನಡೆಸಿ ಫಲಾನುಭವಿಗಳಿಗೆ ಪಿಂಚಣಿ ಮಂಜೂರು ಮಾಡುತ್ತಾರೆ. ಕಂದಾಯ ಇಲಾಖೆಯ ಹಲೋ ಕಂದಾಯ ಸಚಿವರೇ ಟೋಲ್ ಫ್ರೀ ಸಹಾಯವಾಣಿ ಆರಂಭಿಸಿದ್ದು, ಈ ದೂರವಾಣಿಗೆ ಕರೆ ಮಾಡಿದರೆ ಸಹಾಯವಾಣಿಯ ಸಿಬ್ಬಂದಿ ವಿವರ ಪಡೆದು ಸಂಬಂಧಿಸಿದ ಗ್ರಾಮ ಲೆಕ್ಕಗರ ಮೊಬೈಲಿಗೆ ರವಾನಿಸುತ್ತಾರೆ. ಗ್ರಾಮ ಲೆಕ್ಕಿಗರು 72 ಗಂಟೆಯೊಳಗೆ ಪರಿಶೀಲನೆ ನಡೆಸಿ ಪಿಂಚಣಿ ಮಂಜೂರಾತಿ ಆದೇಶ ನೀಡಲಿದ್ದು, ಫಲಾನುಭವಿಯ ಖಾತೆಗೆ ನೇರವಾಗಿ ಹಣ ತಲುಪುವ ವ್ಯವಸ್ಥೆ ಮಾಡಲಾಗಿದೆ ಎಂದರು.

Leave a Reply

Your email address will not be published. Required fields are marked *