ಉಮೇಶ್ ಕತ್ತಿಗೆ ಹೃದಯಾಘಾತ ; ಆಸ್ಪತ್ರೆಗೆ ದಾಖಲು

ಆರೋಗ್ಯ

ಅರಣ್ಯ ಸಚಿವ ಉಮೇಶ್ ಖತ್ತಿಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಬೆಂಗಳೂರು: ಅರಣ್ಯ ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಾಘಾತ ಆಗಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಉಮೇಶ್ ಕತ್ತಿ ಅರಣ್ಯ ಖಾತೆಯನ್ನು ನಿರ್ವಹಿಸುತ್ತಿದ್ದಾರೆ.

 

 

ಇಡೀ‌ ದಿನ ಚೆನ್ನಾಗಿಯೇ ಇದ್ದ ಉಮೇಶ್ ಕತ್ತಿ, ಬೆಂಗಳೂರಿನ ಡಾಲರ್ಸ್ ಕಾಲನಿಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಇಂದು ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಮನೆಯವರು, ಅವರ ಸಹಾಯಕರು ಅವರನ್ನು ಅಲ್ಲಿಯೇ ಹತ್ತಿರದಲ್ಲಿದ್ದ ಎಂಎಸ್ ರಾಮಯ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ಅವರನ್ನು ಪರೀಕ್ಷಿಸಿದ ವೈದ್ಯರು ಸದ್ಯ ತುರ್ತು ನಿಗಾ ಘಟಕಕ್ಕೆ ದಾಖಲಿಸಿ, ಚಿಕಿತ್ಸೆ ನೀಡುತ್ತಿದ್ದಾರೆ.

ಈ ಹಿಂದೆ ಎರಡು ಬಾರಿ ಹೃದಯಾಘಾತ

ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಎರಡು ಬಾರಿ ಉಮೇಶ್ ಕತ್ತಿ ಅವರಿಗೆ ಹಾರ್ಟ್ ಆಟ್ಯಾಕ್ ಆಗಿತ್ತು. ಈ ಹಿಂದೆ ಹೃದಯಾಘಾತವಾದಾಗ ಅವರ ಹಾರ್ಟ್‌ಗೆ ಸ್ಟಂಟ್ ಅಳವಡಿಸಲಾಗಿತ್ತು. ಇದೀಗ ಮೂರನೇ ಬಾರಿಗೆ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದೆ.

Leave a Reply

Your email address will not be published. Required fields are marked *