ಜಮೀನಿನ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಹಿರಿಯೂರಿನ ಕೆ ಆರ್ ಹಳ್ಳಿ ಗ್ರಾಮಾಡಳಿತಾಧಿಕಾರಿ ದಾಸೇಗೌಡ ಜಿಎಂ ರನ್ನು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.
ದಾಸೇಗೌಡ ಲಂಚ ಸ್ವೀಕರಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರಿಂದ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು, ದಾಸೇಗೌಡ ಅವರಿಗೆ ಈ ವಿಷಯವಾಗಿ ಕಾರಣ ಕೇಳಿ ನೋಟೀಸ್ ನೀಡುವ ಮೂಲಕ ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ.