ಜವರಾಯನ ಅಟ್ಟಹಾಸಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ 

ರಾಜ್ಯ

ಜವರಾಯನ ಅಟ್ಟಹಾಸಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

 

 

ಕೋಟೆ ನಾಡು ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಜವರಾಯ ತನ್ನ ಅಟ್ಟಹಾಸ ಮೆರೆದಿದ್ದಾನೆ. ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ  ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ.ಇದರ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರ ಮಲ್ಲಾಪುರ ಗ್ರಾಮದ ಬಳಿ ನಡೆದಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತಪಟ್ಟವರು ವಿಜಾಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕುದುರಿ ಸಾಲವಡಗಿ ಗ್ರಾಮದವರಾಗಿದ್ದಾರೆ.
ಖಾಸಗಿ ಬ್ಯಾಂಕ್ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಮೃತ ದಂಪತಿಯ ಮತ್ತೋರ್ವ ಪುತ್ರ ಆದರ್ಶ (3) ಹಾಗೂ ಪುತ್ರಿ ಅನ್ವಿಕಾ (5) ಮತ್ತು ಕಾರು ಚಾಲಕನಿಗೆ ಗಂಭೀರವಾಗಿ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲರೂ ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ನಸುಕಿನ ಜಾವ 3:30ಕ್ಕೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಸ್ಥಳಕ್ಕೆ ಎಸ್ಪಿ ಪರುಶುರಾಮ್  ಭೇಟಿ ನೀಡಿ  ಪರಿಶೀಲನೆ ನಡೆಸಿದರು.
ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *