ದರ್ಶನ್ ಗೆ ಜೀವಾಧಿ ಶಿಕ್ಷೆ ಕೊಡಿ: ದರ್ಶನ್ ಅಭಿಮಾನಿ ಸಂಘ ಬ್ಯಾನ್ ಮಾಡಿ: ಪ್ರತಿಭಟನಾಕಾರರ ಒತ್ತಾಯ

ರಾಜ್ಯ

 

ನಟ ದರ್ಶನ್ ಮತ್ತು ಆತನ ಗ್ಯಾಂಗ್ನಿಂದ ಹತ್ಯೆಯಾದ ರೇಣುಕಾಸ್ವಾಮಿ ಸಾವನ್ನು ಪ್ರತಿಭಟಿಸಿ ನಗರದಲ್ಲಿ ವೀರಶೈವ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆಯನ್ನು ನಡೆಸಿ ಕೊಲೆಗಡುಕರಿಗೆ ಕಠಿಣವಾದ ಶಿಕ್ಷೆಯನ್ನು ನೀಡುವಂತೆ ಆಗ್ರಹಿಸಲಾಯಿತು

 

ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ರ್ಯಾಲಿಯಲ್ಲಿ ಸಾವಿರಾರು ಜನರು ಸ್ವಯಂ ಆಗಿ ಸೇರಿದ್ದರು, ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಕೋರಿ ಗಾಂಧಿವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಮೌನಾಚರಣೆ ನಡೆಸಿದರು. ಅಲ್ಲಿಂದ ಒನಕೆ ಓಬವ್ವ ವೃತ್ತದವರೆಗೂ ಸಾಗಿದ ಪ್ರತಿಭಟನಾಕಾರರು ಮಾರ್ಗದುದ್ದಕ್ಕೂ ಆಕ್ರೋಶ ಹೊರಹಾಕಿದರು.

 

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, `ಕ್ಷುಲ್ಲಕ ಕಾರಣಕ್ಕಾಗಿ ರೇಣುಕಾಸ್ವಾಮಿಯನ್ನು ಚಿತ್ರಹಿಂಸೆ ಕೊಟ್ಟು ಪ್ರಾಣ ತೆಗೆದಿದ್ದಾರೆ. ಸ್ಟಾರ್ ಪಟ್ಟಕ್ಕೆ ಏರಿದವರು ಕಾನೂನು ಕೈಗೆ ತೆಗೆದುಕೊಳ್ಳಬಹುದು, ದುಡ್ಡಿದೆ, ಏನು ಬೇಕಾದರು ಮಾಡಬಹುದು ಎನ್ನುವ ದುರಾಹಂಕಾರ ಅವರಲ್ಲಿ ಮನೆ ಮಾಡಿದೆ, ರಾಜ್ಯದಲ್ಲಿ ಕಾನೂನು ಎಲ್ಲರಿಗೂ ಒಂದೇ ಶ್ರೀಮಂತರಾದರೂ ಬಡವರಾದರೂ ಸಹಾ ಕಾನೂನನ್ನು ಪಾಲಿಸಬೇಕಿದೆ, ಪ್ರಕರಣದಲ್ಲಿ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕಿದೆ. ಹೋರಾಟದಲ್ಲಿ ಪೊಲೀಸರು, ಗೃಹ ಮಂತ್ರಿಗಳು ಅವರನ್ನು ಉಳಿಸುವ ಪ್ರಯತ್ನ ಅಡಿದರೆ ನಮ್ಮ ಹೋರಾಟ ತೀವ್ರವಾಗುತ್ತದೆ. ಸರ್ಕಾರ ಸಾವಿಗೆ ನ್ಯಾಯ ಕೊಡಿಸಬೇಕು. ದರ್ಶನ್ ಅಭಿಮಾನಿ ಸಂಘವನ್ನ ವಿಸರ್ಜನೆ ಮಾಡಿ ರೇಣುಕಾಸ್ವಾಮಿ ಸಾವಿಗೆ ನ್ಯಾಯ ಕೊಡಿಸಬೇಕುಎಂದು ಆಗ್ರಹಿಸಿದರು.

 

ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಇಂತಹ ಅನೇಕ ಘಟನೆಗಳು ನಡೆದಿದಿದ್ದು, ನಿರ್ವಹಣೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. `ದರ್ಶನ್ ಸಿನಿಮಾಗಳಲ್ಲಿ ಮಾತ್ರ ಆದರ್ಶ ವ್ಯಕ್ತಿ. ಆದರೆ,ನಿಜ ಜೀವನದಲ್ಲಿ ಭಿನ್ನವಾದ ವ್ಯಕ್ತಿ. ತಂದೆ ತಾಯಿಗಳ ಮುಪ್ಪಿನ ಕಾಲದ ನೋವು ಬೇಸರವಾಗುತ್ತದೆ. ಪತ್ನಿ ಗರ್ಭಿಣಿ. ಇದು ನಿಜಕ್ಕೂ ಘೋರ ಅನ್ಯಾಯ. ಎಂದು ದೂರಿದ ಅವರು. ಪ್ರಕರಣದಲ್ಲಿ ದರ್ಶನ ರವರ ಪಾತ್ರ ಏನು ಎಂಬುದನ್ನು ಗೃಹಮಂತ್ರಿಗಳು ತಿಳಿಯಬೇಕಿದೆ ಭಾರತದ ಕಾನೂನಿನ ಅನ್ವಯ ಕಠಿಣ ಶಿಕ್ಷೆ ಆಗಲೇಬೇಕು. ಮೇಲ್ನೋಟಕ್ಕೆ ನೇರವಾಗಿ ಸಿಕ್ಕಿ ಬಿದ್ದಿದ್ದಾರೆ. ಅವರಿಗೆ ಜೀವಾವಧಿ ಶಿಕ್ಷೆ ಕೊಡುವ ಮೂಲಕ ಮನೆತನಕ್ಕೆ ನ್ಯಾಯ ಕೊಡಬೇಕು. ಪ್ರಕರಣ ಹಗುರವಾಗಿ ತೆಗೆದುಕೊಂಡರೆ ಇಡೀ ರಾಜ್ಯದಲ್ಲಿ ಪ್ರತಿಭಟನೆ ಪ್ರಾರಂಭ ಆಗುತ್ತವೆಎಂದು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದರು.

 

 

 

ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮಾತನಾಡಿ, ಎಲ್ಲ ಸಮುದಾಯಗಳ ಜನತೆ ಸೇರಿ ಪ್ರತಿಭಟನೆ ನಡೆಸುತ್ತಿರುವುದು ಮಾನವೀಯತೆಗೆ ಹಿಡಿದ ಕನ್ನಡಿ. ದರ್ಶನ್ ಅಭಿಮಾನಿಗಳಿಗೆ ಇಂದು ಅವರ ವಿಕೃತಿ ಗೊತ್ತಾಗಿದೆ. ಅಂಧಾಭಿಮಾನಿಗಳು ಇದನ್ನು ಅರ್ಥ ಮಾಡಿಕೊಳ್ಳಬೇಕು. ಅಂಧ ಅಭಿಮಾನದ ಕಾರಣಕ್ಕೆ ಆತ ಇಂತಹ ಕೆಲಸ ಮಾಡುತ್ತಿದ್ದಾನೆ. ದರ್ಶನ್ ಅವರ ಬಳಿ ಹಣ ಇದೆ, ಜನ ಇದ್ದಾರೆ. ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಬಿಡಬಾರದುಎಂದು ಆಗ್ರಹಿಸಿದರು.

 

ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಉಪಾಧ್ಯಕ್ಷ ನಾಗರಾಜ್ ಸಂಗಮ್ ಮಾತನಾಡಿ ನಟ ದರ್ಶನ್ ಮೇಲೆ ಈಗಾಗಲೇ ಸಾಕಷ್ಟು ದೂರು ಆಪಾದನೆಗಳಿವೆ. ರಾಜ್ಯ ಸರ್ಕಾರ ಸರ್ಕಾರ ರಕ್ಷಿಸಲು ಹೊರಟಂತಿದೆ. ಸಿ.ಬಿ..ಗೆ ವಹಿಸಿ ತನಿಖೆಗೆ ಆದೇಶಿಸಿದರೆ ನಿಜಾಂಶ ಬಯಲಿಗೆ ಬರುತ್ತದೆ. ಈಗಲಾದರು ದರ್ಶನ್ ಹುಚ್ಚಭಿಮಾನಿಗಳು ಎಚ್ಚೆತ್ತುಕೊಂಡು ಹೊರಬರಬೇಕು. ನಿಸ್ಪಕ್ಷಪಾತ ತನಿಖೆ ನಡೆಸಿ ನೊಂದಿರುವ ಕುಟುಂಬಕ್ಕೆ ನ್ಯಾಯ ಕೊಡಬೇಕೆಂದು ವಿನಂತಿಸಿದರು.

 

ಚಿತ್ರದುರ್ಗ ನಗರದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ ಮತ್ತು 12 ಜನರು ಆರೋಪ ಎದುರಿಸುತ್ತಿದ್ದು, ಇಂತಹ ಅಮಾನವೀಯ ಕೃತ್ಯ ಎಸಗಿರುವ ಹಂತಕರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಹಿಂದೂ ಯುವ ಸೇನೆ ಜಿಲ್ಲಾಧ್ಯಕ್ಷ ಎನ್.. ನಾಗರಾಜ್ ತೀವ್ರವಾಗಿ ಖಂಡಿಸಿದ್ದಾರೆ. ಅತ್ಯಂತ ಹೇಯ ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆಯಾಗಲಿ. ಇಂತಹ ಪ್ರಕರಣಗಳು ರಾಜ್ಯದಲ್ಲಿ ಮತ್ತೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಹಿಂದೂ ಯುವ ಸೇನೆ ಜಿಲ್ಲಾಧ್ಯಕ್ಷ ಎನ್.. ನಾಗರಾಜು ಅಗ್ರಹಿಸಿದ್ದಾರೆ.

 

ಛಲವಾದಿ ಗುರುಪೀಠದ ಶ್ರೀ ಬಸವನಾಗೀದೇವ ಸ್ವಾಮೀಜಿ, ಕರವೇ ಜಿಲ್ಲಾಧ್ಯಕ್ಷ ರಮೇಶ್, ವಕೀಲರಾದ ಕೆ.ಎನ್.ವಿಶ್ವನಾಥಯ್ಯ ಉಮೇಶ್, ಗುರು, ನಗರಸಭೆ ಮಾಜಿ ಅಧ್ಯಕ್ಷೆ ಸುನಿತಾ ಮಲ್ಲಿಕಾರ್ಜುನ್, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಕೆ.ಎಂ.ವೀರೇಶ್, ಪಟೇಲ್ ಶಿವಕುಮಾರ್, ಬಜರಂಗದಳ ರಾಜ್ಯ ಸಂಯೋಜಕ ಪ್ರಭಂಜನ್, ಕೆಇಬಿ ಷಣ್ಮುಖಪ್ಪ, ಮಹಡಿ ಶಿವಮೂರ್ತಿ ಕಾಂಗ್ರೆಸ್ ಮುಖಂಡ ಮರುಳಾರಾಧ್ಯ  ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ, ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಕಾರ್ಯದರ್ಶಿ ಡಿ.ಟಿ.ಶಿವಾನಂದ್, ಜೆಡಿಎಸ್. ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಗೀತ, ರೇಣುಕಾರಾಧ್ಯ, ರುದ್ರೇಶ್, ಸಿದ್ದೇಶ್, ವೀರಶೈವ ಲಿಂಗಾಯಿತ ಸಮಾಜದ ಮುಖಂಡರು, ದಲಿತ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

Leave a Reply

Your email address will not be published. Required fields are marked *