ಸಿನೆಮಾ

ಹಿರಿಯ ನಟ ಎಚ್.ಜಿ. ಸೋಮಶೇಖರ ರಾವ್ ವಿಧಿವಶ

ಬೆಂಗಳೂರು, ನ. 3:ಹಿರಿಯ ನಟ, ರಂಗಭೂಮಿ ಕಲಾವಿದ ಎಚ್.ಜಿ. ಸೋಮಶೇಖರ ರಾವ್ ಅವರು ಮಂಗಳವಾರ(ನ.3) ದಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸೋಮಶೇಖರ ರಾವ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಜಯನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಕೊಡಿಸುವುದಕ್ಕೂ ಮುನ್ನವೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು.

86 ವರ್ಷ ವಯಸ್ಸಿನ ಸೋಮಶೇಖರ್ ರಾವ್ ಅವರು ಪತ್ನಿ ಹಾಗೂ ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ವರ್ಗ, ಅಭಿಮಾನಿಗಳನ್ನು ಅಗಲಿದ್ದಾರೆ. ಸಂಜೆ 4 ಗಂಟೆಗೆ ಬನಶಂಕರಿಯ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಸಲಾಯಿತೆಂದು ಕುಟುಂಬದವರು ಹೇಳಿದ್ದಾರೆ.

ಹಿರಿಯ ನಟ ದತ್ತಣ್ಣ (ದತ್ತಾತ್ರೇಯ) ಅವರ ಸಹೋದರರಾದ ಸೋಮಶೇಖರ ರಾವ್ ಅವರು ಕೆನರಾ ಬ್ಯಾಂಕ್‍ನ ಉದ್ಯೋಗಿಯಾಗಿದ್ದರು. ಮಿಂಚಿನ ಓಟ, ಮಿಥಿಲೆಯ ಸೀತೆಯರು, ಸಾವಿತ್ರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹರಕೆಯ ಕುರಿ ಚಿತ್ರಕ್ಕಾಗಿ ರಾಜ್ಯ ಪೆÇೀಷಕ ನಟ ಪ್ರಶಸ್ತಿ ಪಡೆದುಕೊಂಡಿದ್ದರು. ರಂಗಭೂಮಿಯಲ್ಲಿ ಹಲವು ಪ್ರಯೋಗಗಳಿಗೆ ಪೆÇ್ರೀತ್ಸಾಹ ನೀಡಿದ್ದರು.

 

 

ಹೂಮಳೆ, ನಂ. 27 ಮಾವಳ್ಳಿ ಸರ್ಕಲ್, ಹರಕೆಯ ಕುರಿ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಸೋಮಶೇಖರ್ ರಾಯರು, ಕನ್ನಡದ ಮತ್ತೋರ್ವ ಹಿರಿಯ ನಟ ದತ್ತಣ್ಣ ಅವರ ಸಹೋದರ. ಹರಕೆಯ ಕುರಿ ಚಿತ್ರದಲ್ಲಿ ಈ ಇಬ್ಬರು ಸಹೋದರರು ಒಟ್ಟಿಗೆ ನಟಿಸಿದ್ದರು.

ಎಚ್.ಜಿ.ಸೋಮಶೇಖರರಾಯರು ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಅಪಾರ ಆಸಕ್ತಿ ಹೊಂದಿದವರು. ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದವರು. 1981ರಲ್ಲಿ ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು.

ರವಿ ನಿರ್ದೇಶನದ ‘ಮಿಥಿಲೆಯ ಸೀತೆಯರು’ ಇವರ ಅಭಿನಯ ಸಾಮಥ್ರ್ಯವನ್ನು ಗುರುತಿಸುವಂತೆ ಮಾಡಿತು. ರವಿಯವರೇ ನಿರ್ದೇಶಿಸಿದ ಇನ್ನೊಂದು ಚಿತ್ರ ‘ಹರಕೆಯ ಕುರಿ’ಯಲ್ಲಿ ಸೋಮಶೇಖರ ರಾಯರು ನೀಡಿದ ಸೊಗಸಾದ ಅಭಿನಯಕ್ಕಾಗಿ 1992 -93ನೇ ಸಾಲಿನ ರಾಜ್ಯ ಸರ್ಕಾರದ ಅತ್ಯುತ್ತಮ ಪೆÇೀಷಕ ನಟ ಪ್ರಶಸ್ತಿ ಲಭಿಸಿತು. ಕೆನರಾ ಬ್ಯಾಂಕ್ನಲ್ಲಿ ಉನ್ನತ ಅಧಿಕಾರಿಯಾಗಿ ನಿವೃತ್ತಿ ಹೊಂದಿ ರಂಗಭೂಮಿಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದರು.

ಸಂಯುಕ್ತವಾಣಿ

ಡಿ.ಕುಮಾರಸ್ವಾಮಿ

ಚಿತ್ರದುರ್ಗ

Leave a Reply

Your email address will not be published. Required fields are marked *