ಹಾಲಿನ ಪ್ರಮಾಣ ಹೆಚ್ಚಿಸಿದೆ, ಹಾಲಿನ ದರ ಹೆಚ್ಚಳವಾಗಿಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯ

ಹಾಲಿನ ಪ್ರಮಾಣ ಹೆಚ್ಚಿಸಿ ಅದಕ್ಕೆ ತಗುಲುವ ದರವನ್ನು ಹಾಕಲಾಗಿದೆ ಹಾಲಿನ ದರ ಹೆಚ್ಚಳವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2.00 ರೂ.ಗಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು.

ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸರ್ಕಾರ ಜನರಿಗೆ ಕೊಟ್ಟಿರುವ ಗ್ಯಾರಂಟಿ ಭಾಗ್ಯ ಎಂದು ಹಾಲಿನ ದರ ಏರಿಕೆ ಬಗ್ಗೆ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾಸ್ವಾಮಿ ಅವರು ಮಾಡಿರುವ ಟೀಕೆ ಬಗ್ಗೆ ಪ್ರತಿಕ್ರಿಯೆ ನೀಡಿ ನಾಳೆ ಈ ಬಗ್ಗೆ ಜಾಹೀರಾತು ನೀಡಲಾಗುತ್ತಿದೆ. ಬೆಲೆ ಏರಿಕೆ ಮಾಡಿಲ್ಲ. ಹಾಲಿನ ಪ್ರಮಾಣ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದರು.

 

 

ಹಾಲಿನ ಉತ್ಪಾದನೆ ಜಾಸ್ತಿಯಾಗಿದ್ದು ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಹೆಚ್ಚು ಹಾಲು ನೀಡಿ ದರ ಹೆಚ್ಚಿಸಲಾಗಿದೆ ಎಂದರು.

 

*ಕುರಿಗಾಹಿಗಳು ಕುರಿತ ಬಜೆಟ್ ಘೋಷಣೆಗಳಿಗೆ ಸರ್ಕಾರಿ ಆದೇಶ*

ಕುರಿಗಾಹಿಗಳು ಬಂದೂಕು ಪರವಾನಗಿ, ಸಂಚಾರಿ ಕುರಿಗಾಹಿಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ, ಆಸ್ಪತ್ರೆಗಳಲ್ಲಿ ಔಷಧಿ, ಚಿಕಿತ್ಸೆ ದೊರೆಯಬೇಕು. ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸುವುದಿಲ್ಲ, ಅರಣ್ಯ ಪ್ರದೇಶದಲ್ಲಿ ಕುರಿ ಮೇಯಿಸಲು ಅವಕಾಶವಿಲ್ಲ ಎಂಬ ಸಮಸ್ಯೆ ಗಳನ್ನು ಕುರಿಗಾಹಿಗಳು ಗಮನಕ್ಕೆ ತಂದಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಕೆಲವು ಘೋಷಣೆಗಳನ್ನು ಮಾಡಿದ್ದು ಅವುಗಳಿಗೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಸೂಚಿಸಲಾಗಿದೆ.=

ಅನುಗ್ರಹ ಯೋಜನೆಯನ್ನು ಬಿಜೆಪಿ ಸರ್ಕಾರ ನಿಲ್ಲಿಸಿತ್ತು. ಈ ಬಗ್ಗೆ ವರದಿ ತರಿಸಿ ಯಾರಿಗೆ ಪರಿಹಾರ ದೊರೆತಿಲ್ಲವು ಅವರಿಗೆ ಪರಿಹಾರ ನೀಡಲು ಕ್ರಮ ವಹಿಸಲಾಗುವುದು ಎಂದರು.

Leave a Reply

Your email address will not be published. Required fields are marked *