ಮೈಸೂರು: ಆಯಾಮ್ಮ ಏನೂ ಕೆಲಸ ಮಾಡಲ್ಲ ಏನೇ ಕೆಲಸ ಇದ್ದರೂ ನನಗೆ ಹೇಳಿ ಎಂದು ಮೈಸೂರು ಸಂಸದ ಪ್ರತಾಪ ಸಿಂಹ ಮಂಡ್ಯ ಸಂಸದೆ ಸುಮಲತಾ ಬಗ್ಗೆ ಮಾತನಾಡಿರುವ ವಿಡಿಯೋ ಈಗ ಸಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.
ಬೆಂಗಳೂರು ಮೈಸೂರು ದಶಪಥ ಕಾಮಗಾರಿಯ ಬಗ್ಗೆ ಅಧಿಕಾರಿಯೊಬ್ಬರ ಜೊತೆ ಪೋನಿನಲ್ಲಿ ಮಾತನಾಡುವಾಗ ಈ ರೀತಿ ಟೀಕಿಸಿರುವುದು ಕೇಳಿ ಬಂದಿದೆ. ದೇವೆಗೌಡರ ಕುಟುಂಬವನ್ನು ಸೋಲಿಸಲು ಸುಮಲತಾ ಅವರನ್ನು ಗೆಲ್ಲಿಸಿದ್ದಾರೆ. ಅವರು ಯಾವ ಕೆಲಸ ಮಾಡುವುದಿಲ್ಲ ಎಂದಿದ್ದಾರೆ. ಸುಮಲತಾ ವಿರುದ್ಧ ಅಧಿಕಾರಿ ದೂರು ಹೇಳಿದಾಗ ಸುಮಲತಾ ವಿರುದ್ದವೇ ಪ್ರತಾಪ್ ಸಿಂಹ
ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ.ಮಂಡ್ಯ ತಾಲೂಕಿನ ಯಲಿಯೂರು ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಅಧಿಕಾರಿಯೊಂದಿಗೆ ಫೋನ್ ನಲ್ಲಿ ಮಾತನಾಡಿದ್ದಾರೆ. ಇದರಿಂದ ಸುಮಲತಾ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾಜಿಕ ಜಾಲ ತಾಣದಲ್ಲಿ ಪ್ರತಾಪ್ ಸಿಂಹ ವಿರುದ್ಧ ಟೀಕಾ ಪ್ರಕಾರ ಮಾಡಿದ್ದಾರೆ.