ಪಾವಗಡ-ಮಡಕಶಿರಾ ಹೊಸ ರೈಲು ಮಾರ್ಗಕ್ಕೆ ರೂ.265.00 ಕೋಟಿ : ಸಂಸದ ಗೋವಿಂದ ಕಾರಜೋಳ

ರಾಜ್ಯ

ಪಾವಗಡ-ಮಡಕಶಿರಾ ಹೊಸ ರೈಲು ಮಾರ್ಗಕ್ಕೆ ರೂ.265.00 ಕೋಟಿ : ಸಂಸದ ಗೋವಿಂದ ಕಾರಜೋಳ

 

 

ತುಮಕೂರು-ರಾಯದುರ್ಗ ನೂತನ ರೈಲುಮಾರ್ಗ ಈ ಭಾಗದ ಅತ್ಯಂತ ಮಹತ್ವದ ಯೋಜನೆಯಾಗಿದೆ, ಈ ಯೋಜನೆಯ ಭಾಗವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪಾವಗಡದಿಂದ ಮಡಕಶಿರಾ ನಡುವಿನ 22 ಕಿ.ಮೀ ಉದ್ದದ ಹೊಸ ಬ್ರಾಡ್‍ಗೇಜ್ ರೈಲುಮಾರ್ಗ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ರೂ.265.92 ಕೋಟಿ ಅನುದಾನ ಒದಗಿಸುವ ಮೂಲಕ ತುಮಕೂರು-ರಾಯದುರ್ಗ ಹೊಸ ಬ್ರಾಡ್‍ಗೇಜ್ ರೈಲು ಮಾರ್ಗಕ್ಕೆ ವೇಗ ನೀಡಿದೆ ಎಂದು ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಕಾರಜೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಈ ಬಗ್ಗೆ ನೈರುತ್ಯ ರೈಲ್ವೆ ವಲಯದಿಂದ ಟೆಂಡರ್ ಕರೆಯಲಾಗಿದೆ, ದಿನಾಂಕ: 11.09.2024 ರಂದು ಈ ಕಾಮಗಾರಿಯ ಬಿಡ್ ತೆರೆಯಲಿದ್ದು, ಕಾಮಗಾರಿ ನಿರ್ವಹಿಸುವ ಏಜೆನ್ಸಿ ಅಂತಿಮಗೊಳ್ಳಲಿದೆ. ಒಟ್ಟಾರೆಯಾಗಿ ಈ ಯೋಜನೆಯನ್ನು 18 ತಿಂಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ.
ಈ ಯೋಜನೆಯಡಿ ಪಾವಗಡ ಮತ್ತು ಮಡಕಶಿರಾ ನಗರಗಳಲ್ಲಿ 510 ಚದುರ ಮೀಟರ್ ವಿಸ್ತೀರ್ಣದ ಸುಸಜ್ಜಿತ ರೈಲ್ವೆ ನಿಲ್ದಾಣಗಳು ನಿರ್ಮಾಣವಾಗಲಿವೆ, ಹಾಗೂ ಈ ಮಾರ್ಗದಲ್ಲಿ ತಡೆರಹಿತ ರೈಲು ಸಂಚಾರಕ್ಕೆ 3 ಪ್ರಮುಖ ಸೇತುವೆಗಳು, 32 ಸಣ್ಣ ಸೇತುವೆಗಳು, 21ಅಂಡರ್ ಬ್ರಿಜ್ಡ್ ಗಳು ಹಾಗೂ 4 ಸೇತುವೆ ಗಳು ನಿರ್ಮಾಣವಾಗಲಿವೆ, ಒಟ್ಟಾರೆಯಾಗಿ ಯಾವುದೇ ಅಡೆತಡೆಯಿಲ್ಲದೇ ರೈಲುಗಳು ಪ್ರತಿಗಂಟೆಗೆ 110 ಕಿ.ಮೀ ವೇಗದಲ್ಲಿ ಚಲಿಸಲು ಯಾವ ಅಗತ್ಯ ಮೂಲಸೌಕರ್ಯಗಳು ಬೇಕೋ ಆ ಎಲ್ಲವನ್ನೂ ಈ ಯೋಜನೆ ಒಳಗೊಂಡಿದೆ. ತುಮಕೂರು-ರಾಯದುರ್ಗ ನೂತನ ರೈಲು ಮಾರ್ಗ ಪೂರ್ಣಗೊಂಡರೆ,ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ ಎಂದು ಗೋವಿಂದ ಕಾರಜೋಳ ತಿಳಿಸಿದ್ದಾರೆ.

Leave a Reply

Your email address will not be published. Required fields are marked *